7 ವರ್ಷದ ಬಾಲೆ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಶಿಕ್ಷೆ
ಚಾಮರಾಜನಗರ: 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಅದೇಶ ನೀಡಿದೆ.
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಸತೀಶ್(24) ಶಿಕ್ಷೆಗೊಳಗಾದ ಅಪರಾಧಿ. 7 ವರ್ಷದ ಬಾಲಕಿ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ವಿಚಾರ ಬೇರೆಯವರಿಗೆ ತಿಳಿಸಿದರೇ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದನು.
ಘಟನೆ ಹಿನ್ನೆಲೆ: ಅಂಗಡಿಗೆ ತೆರಳಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದ ಈತ ಲೈಂಗಿಕ ದೌರ್ಜನ್ಯ ಎಸಗಿದ್ದರ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಕಳೆದ 2021 ರಂದು ಪ್ರಕರಣ ದಾಖಲಾಗಿತ್ತು. ವಾದ-ಪ್ರತಿವಾದ ಆಲಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಾಮುಕನಿಗೆ ನ್ಯಾ.ಎ.ಸಿ.ನಿಶಾರಾಣಿ ಅವರು 20 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ.
ಜೊತೆಗೆ, ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರವು 2 ಲಕ್ಷ ಪರಿಹಾರವನ್ನು 30 ದಿನದೊಳಗೆ ಕೊಡಬೇಕೆಂದು ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























