ಕೂಲಿ ಕಾರ್ಮಿಕ ಕುಟುಂಬದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ - Mahanayaka
12:34 AM Tuesday 27 - February 2024

ಕೂಲಿ ಕಾರ್ಮಿಕ ಕುಟುಂಬದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

pocso act
15/11/2023

ದಕ್ಷಿಣ ಕನ್ನಡ: ಕೂಲಿ ಕಾರ್ಮಿಕ ಕುಟುಂಬವೊಂದರ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವಿಚಾರವಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕಾಣಿಯೂರು ಎಂಬಲ್ಲಿ ಈ ಘಟನೆ ನಡೆದಿದ್ದು, ಹೊರ ರಾಜ್ಯದ ಕೂಲಿ ಕಾರ್ಮಿಕ ಕುಟುಂಬ ಕೆಲಸಕ್ಕೆಂದು ಬಂದಿದ್ದು, ಈ ಕುಟುಂಬದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಆರೋಪಿ ನಾಗೇಶ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ಪೋಷಕರು ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ