ಕೂಲಿ ಕಾರ್ಮಿಕ ಕುಟುಂಬದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

pocso act
15/11/2023

ದಕ್ಷಿಣ ಕನ್ನಡ: ಕೂಲಿ ಕಾರ್ಮಿಕ ಕುಟುಂಬವೊಂದರ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವಿಚಾರವಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕಾಣಿಯೂರು ಎಂಬಲ್ಲಿ ಈ ಘಟನೆ ನಡೆದಿದ್ದು, ಹೊರ ರಾಜ್ಯದ ಕೂಲಿ ಕಾರ್ಮಿಕ ಕುಟುಂಬ ಕೆಲಸಕ್ಕೆಂದು ಬಂದಿದ್ದು, ಈ ಕುಟುಂಬದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಆರೋಪಿ ನಾಗೇಶ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ಪೋಷಕರು ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version