ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ
ಸುರತ್ಕಲ್: ಬಾಲಕನಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಸುರತ್ಕಲ್ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
ಚೊಕ್ಕಬೆಟ್ಟು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿಯಾಗಿದ್ದಾನೆ. ಈತ ಚೊಕ್ಕಬೆಟ್ಟು ಪೇಟೆಯಲ್ಲಿ ಹನಿ ಫ್ಯಾಶನ್ ಮತ್ತು ಜನರಲ್ ಸ್ಟೋರ್ ನಡೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ವರದಿಗಳ ಪ್ರಕಾರ, ತನ್ನ ಅಂಗಡಿಗೆ ಚಾಕೊಲೇಟ್ ಖರೀದಿಸಲು ಬಂದಿದ್ದ 11 ವರ್ಷದ ಬಾಲಕನನ್ನು ಕೈಕಾಲು ಕಟ್ಟಿ ಹಾಕಿ ಅಂಗಡಿಯ ಕೋಣೆಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಸಂಬಂಧ ನೊಂದ ಬಾಲಕನ ತಾಯಿ ಸುರತ್ಕಲ್ ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಹಿನ್ನೆಲೆ ಪೊಲೀಸರು ಕಾನೂನು ಕ್ರಮಕೈಗೊಂಡಿದ್ದಾರೆ.
ಆರೋಪಿಯ ವಿರುದ್ಧ ಕಲಂ 4,6 ಪೋಕ್ಸೋ ಹಾಗೂ 351(2), 117(2)ಬಿಎನ್ ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮಜರುಗಿಸಲಾಗಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























