ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್‌ ಐಆರ್ - Mahanayaka
11:45 PM Wednesday 29 - October 2025

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್‌ ಐಆರ್

yediyurappa
15/03/2024

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಫ್‌ ಐಆರ್‌ ದಾಖಲಿಸಲಾಗಿದೆ.

ಕಳೆದ ಫೆಬ್ರವರಿ 2ರಂದು ಸಹಾಯ ಕೇಳಲು ಹೋಗಿದ್ದ ಬಾಲಕಿಯ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಇದೀಗ ಪೋಕ್ಸೋ ಕಾಯ್ದೆಯ ಸಂಕಷ್ಟಕ್ಕೆ ಮಾಜಿ ಸಿಎಂ ಸಿಲುಕಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್‌ ಮೇನ್‌ ಗಳು ಸೇರಿದಂತೆ 53 ಮಂದಿಯ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ನೊಂದ ಬಾಲಕಿಯ ತಾಯಿ ದೂರು ನೀಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ