ಪ್ರೀತಿಸುವ ನೆಪದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್
ಕಡಬ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪ್ರೀತಿಸುವ ನೆಪದಲ್ಲಿ ಬಾಡಿಗೆ ರೂಂಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ. ಈತ ಪುತ್ತೂರು ಬಳಿಯ ಬಾಡಿಗೆ ರೂಂಗೆ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿಯ ವಿರುದ್ಧ ಪೋಕ್ಸೋ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಸುಳ್ಯದಲ್ಲಿ ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: