ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

guruprasad
30/06/2025

ಚಿಕ್ಕಮಗಳೂರು:   ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ ಎಂದು ಅಪ್ರಾಪ್ತೆಯನ್ನು ನಂಬಿಸಿದ ಯುವಕನೊಬ್ಬ ಆಕೆಯ ಮೇಲೆ 10 ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಾಡಂಚಿನ ಕುಗ್ರಾಮವೊಂದರಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿ ಗುರುಪ್ರಸಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೊಂದ ಬಾಲಕಿ ವಸತಿ ಶಾಲೆಯಲ್ಲಿ ಓದುತ್ತಿದ್ದಳು. ಆಕೆ ಮನೆಗೆ ಬಂದ ವೇಳೆ ,ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕಾಡಿಗೆ ಕರೆದೊಯ್ದು ಆರೋಪಿಯು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

ಲೈಂಗಿಕ ದೌರ್ಜನ್ಯದ ಹಿನ್ನೆಲೆ ಬಾಲಕಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ತೆರಳಿದ್ದು, ಈ ವೇಳೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ.  ಆರೋಪಿಯು ಲೈಂಗಿಕ ದೌರ್ಜನ್ಯ ನಡೆಸಿದ ಬಳಿಕ, ಇದರ ಬಗ್ಗೆ ಯಾರಿಗಾದರೂ ಹೇಳಿದರೆ, ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದಾನೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version