ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಬಂದ್ ಗೆ ಕರೆ ನೀಡದಂತೆ ಕೋರ್ಟ್ ನಿರ್ಬಂಧ - Mahanayaka
12:47 AM Saturday 18 - October 2025

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಬಂದ್ ಗೆ ಕರೆ ನೀಡದಂತೆ ಕೋರ್ಟ್ ನಿರ್ಬಂಧ

24/08/2024

ಥಾಣೆ ಜಿಲ್ಲೆಯ ಬದ್ಲಾಪುರ್ ನ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿ ವಿರೋಧ ಪಕ್ಷಗಳ ಮೈತ್ರಿಕೂಟ ಮಹಾವಿಕಾಸ್ ಅಘಾಡಿ ಆಗಸ್ಟ್ 24ರಂದು ಮಹಾರಾಷ್ಟ್ರ ಬಂದ್ ಗೆ ಕರೆ ನೀಡಿತ್ತು. ಮಹಾರಾಷ್ಟ್ರ ಬಂದ್ ಗೆ ಕರೆ ನೀಡದಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಶುಕ್ರವಾರ ಬಾಂಬೆ ಹೈಕೋರ್ಟ್ ಈಗ ನಿರ್ಬಂಧ ಹೇರಿದೆ.


Provided by

ಬದ್ಲಾಪುರ್ ನಲ್ಲಿನ ಕಿಂಡರ್ ಗಾರ್ಟನ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಆಗಸ್ಟ್ 17ರಂದು ಪೊಲೀಸರು ಬಂಧಿಸಿದ್ದರು. ದೂರಿನ ಪ್ರಕಾರ, ಆರೋಪಿಯು ಸಂತ್ರಸ್ತ ಬಾಲಕಿಯರ ಮೇಲೆ ಶಾಲೆಯ ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಹೇಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಈ ಸಂಬಂಧ ದೂರು ಸ್ವೀಕರಿಸುವುದಕ್ಕೂ ಮುನ್ನ, ಸಂತ್ರಸ್ತ ಬಾಲಕಿಯರ ಪೋಷಕರು 11 ಗಂಟೆ ಕಾಲ ಬದ್ಲಾಪುರ್ ಪೊಲೀಸ್ ಠಾಣೆಯ ಬಳಿ ಕಾಯುವಂತೆ ಮಾಡಲಾಗಿತ್ತು ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಈ ಘಟನೆಯನ್ನು ಖಂಡಿಸಿ ಸಾವಿರಾರು ಪ್ರತಿಭಟನಾಕಾರರು ಬದ್ಲಾಪುರ್ ನಿಲ್ದಾಣದ ಬಳಿಯ ರೈಲ್ವೆ ಹಳಿಗಳನ್ನು ಬಂದ್ ಮಾಡಿದ್ದರು ಹಾಗೂ ಶಾಲೆಯೊಳಗೆ ನುಗ್ಗಿದ್ದರು. ಪ್ರತಿಭಟನೆ ಇಳಿದವರ ಮೇಲೆಯೇ ಹಲ್ಲೆ ಮತ್ತು ಕೇಸ್‌ ಹಾಕಿದ್ದನ್ನು ವಿರೋಧಿಸಿ ಮಹಾವಿಕಾಸ್ ಅಘಾಡಿ ಮಹಾರಾಷ್ಟ್ರ ಬಂದ್ ಗೆ ಕರೆ ನೀಡಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ