ಕಾರಿನಲ್ಲಿ ಇಬ್ಬರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ: ಐವರು ಆರೋಪಿಗಳ ಅರೆಸ್ಟ್! - Mahanayaka

ಕಾರಿನಲ್ಲಿ ಇಬ್ಬರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ: ಐವರು ಆರೋಪಿಗಳ ಅರೆಸ್ಟ್!

police
12/11/2024

ನವದೆಹಲಿ: ಕಾರಿನಲ್ಲಿ ಇಬ್ಬರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ನ. 10ರಂದು ಕಸ್ತೂರ್ಬಾ ನಿಕೇತನ ಪ್ರದೇಶದಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ 17 ಮತ್ತು 22 ವರ್ಷದ ಇಬ್ಬರು ಯುವತಿಯರು ದೂರು ನೀಡಿದ್ದರು. ಈ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಿವಂ ಪರ್ಚಾ, ಅಮನ್ ಪಾಲ್, ಆಶಿಶ್, ಅಮರ್ ಮೆಹ್ರಾ ಮತ್ತು ಅಭಿಷೇಕ್ ಎಂಬ ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಅತ್ಯಾಚಾರ ಯತ್ನ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ