ಯಡಿಯೂರಪ್ಪ ವಿರುದ್ಧದ ಲೈಂಗಿಕ ಕಿರುಕುಳ ಕೇಸ್: ಡಾ.ಜಿ.ಪರಮೇಶ್ವರ್ ಹೇಳಿದಿಷ್ಟು…!

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.
ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ ಎಂದು ಅವರು ಹೇಳಿದರು.
ಮಹಿಳೆಗೆ ರಕ್ಷಣೆಯ ಅಗತ್ಯ ಬಿದ್ದರೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.
ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಕೆಲವರು ಹೇಳುತ್ತಿದ್ದಾರೆ ಎಂದ ಪರಮೇಶ್ವರ್, ಈ ಪ್ರಕರಣ ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದೆ. ಯಾವುದೇ ವಿಷಯ ಆದರೂ ಎಚ್ಚರಿಕೆಯಿಂದ ಹೇಳಬೇಕು ಎಂದರು.
ಇನ್ನೂ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಇದೊಂದು ಸೂಕ್ಷ್ಮ ವಿಷಯವಾಗಿರುವುದರಿಂದ ಗೃಹ ಸಚಿವರೇ ಮಾತಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth