13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯೋಪಾಧ್ಯಾಯ, ದೇವಸ್ಥಾನದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ ಅರೆಸ್ಟ್!

rajendra acharya
08/04/2024

ಕಾರ್ಕಳ: 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬೋಳ ಗ್ರಾಮದ ಪಿಲಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ, ಬೋಳ ವಂಜಾರಕಟ್ಟೆ ನಿವಾಸಿ, ಇಚ್ಚೋಡಿ ಮಹಾಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ(58) ಬಂಧಿತ ಆರೋಪಿಯಾಗಿದ್ದಾನೆ.

2023ರ ಜೂನ್ 5ರಿಂದ 2024ರ ಮಧ್ಯಾವಧಿಯಲ್ಲಿ ಶಾಲೆಯ 13 ಮಕ್ಕಳಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದನು. ವಿದ್ಯಾರ್ಥಿನಿಯೋರ್ವಳ ಅಕ್ಕನ ಮೊಬೈಲ್ ಗೆ ಅಸಭ್ಯ ಫೋಟೋಗಳನ್ನು ಕಳುಹಿಸಿ ಕಿರುಕುಳ ನೀಡಿದ್ದನು ಎಂದು ದೂರಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಉಡುಪಿ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು 14 ದಿನಗಳ ಕಾಲ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version