ಡ್ರಾಪ್ ಕೊಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಡಾನ್ಸ್ ಕೊರಿಯೋಗ್ರಾಫರ್ ಬಂಧನ

police
19/08/2024

ಬೆಂಗಳೂರು: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ  ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಆರೋಪಿಯನ್ನು ಆಡುಗೋಡಿಯಲ್ಲಿ ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಮುಖೇಶ್ವರನ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಯುವತಿಗೆ ಡ್ರಾಪ್ ನೀಡುವ ನೆಪದಲ್ಲಿ ಲೈಂಗಿಕ  ಕಿರುಕುಳ ನೀಡಿ ಪರಾರಿಯಾಗಿದ್ದ.

ಆಡುಗೋಡಿಯ ಚಂದ್ರಪ್ಪನಗರದಲ್ಲಿ ವಾಸವಾಗಿದ್ದ ಆರೋಪಿಯ ಬೈಕ್ ನಂಬರ್ ಆಧಾರದ ಮೇಲೆ ಆತನನ್ನು ಬಂಧಿಸಲಾಗಿದೆ. ಆರೋಪಿಯು ಡಾನ್ಸ್ ಕೊರಿಯೋಗ್ರಾಫರ್ ಆಗಿದ್ದ ಎಂದು ಹೇಳಲಾಗಿದೆ.

ಘಟನೆ ಸಂಬಂಧ  ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಹೆಚ್‌ ಎಸ್‌ ಆರ್‌ ಲೇಔಟ್‌ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ ಎಂದು ವರದಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version