5:45 AM Thursday 29 - January 2026

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ 39 ಸಿಬ್ಬಂದಿಗೆ ಕೊರೊನಾ ಪಾಸಿಟಿವ್

27/11/2020

ಶಬರಿಮಲೆ: ಕೊವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಬಳಿಕ ತೆರೆಯಲಾಗಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ  ದೇಗುಲದಲ್ಲಿ ಈವರೆಗೆ 39 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

ನವೆಂಬರ್ 16ರಂದು ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಾಗಿಲು ತೆರೆದಿತ್ತು. ಆ ಬಳಿಕ ಪೊಲೀಸ್ ಸಿಬ್ಬಂದಿ, ದೇವಾಲಯದ ನೌಕರರು ಸೇರಿದಂತೆ 39 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ.

ತಿರುವಂಕೂರು ದೇವಸ್ವಂ ಮಂಡಳಿಯ ಮೂಲಗಳ ಪ್ರಕಾರ, ಒಟ್ಟು ಪ್ರಕರಣಗಳಲ್ಲಿ 27 ಮಂದಿ ವಿವಿಧ ಇಲಾಖೆಗಳ ನೌಕರರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು ಅವರನ್ನು ಕೊವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ದೇವಸ್ಥಾನಕ್ಕೆ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ ಮಾಡಬೇಕು ಎಂದು ತಿರುವಂಕೂರು ದೇವಸ್ವಂ ಮಂಡಳಿ ಬೇಡಿಕೆ ಇರಿಸಿದ ಬೆನ್ನಲ್ಲೇ ದೇವಸ್ಥಾನದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ.

 

ಇತ್ತೀಚಿನ ಸುದ್ದಿ

Exit mobile version