ಶಾಹಿ ಈದ್ಗಾ ಮಸೀದಿ ಸಮೀಕ್ಷೆ ವಿಚಾರ: ಆದೇಶದ ಮೇಲಿನ ತಡೆಯಾಜ್ಞೆ ವಿಸ್ತರಣೆ - Mahanayaka
1:25 AM Wednesday 12 - February 2025

ಶಾಹಿ ಈದ್ಗಾ ಮಸೀದಿ ಸಮೀಕ್ಷೆ ವಿಚಾರ: ಆದೇಶದ ಮೇಲಿನ ತಡೆಯಾಜ್ಞೆ ವಿಸ್ತರಣೆ

22/01/2025

ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಬುಧವಾರ ವಿಸ್ತರಿಸಿದೆ. ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಕಳೆದ ಜನವರಿ 16ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ಪೀಠವು, ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ವಿರುದ್ಧದ ‘ಶಾಹಿ ಮಸೀದಿ ಈದ್ಗಾ ಟ್ರಸ್ಟ್ ನಿರ್ವಹಣಾ ಸಮಿತಿ’ಯ ಅರ್ಜಿ ವಿಚಾರಣೆ ನಡೆಸಿ ಈ ಆದೇಶವನ್ನು ನೀಡಿದೆ.

ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿತ್ತು. ಹೈಕೋರ್ಟ್ ನ ಡಿಸೆಂಬರ್ 14, 2023ರ ಈ ಆದೇಶಕ್ಕೆ ಕಳೆದ ಜನವರಿ 16ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ