ಆಟೋಗೆ ಡಿಕ್ಕಿ ಹೊಡೆದ ಟ್ರಕ್: 12 ಮಂದಿಯ ದಾರುಣ ಸಾವು - Mahanayaka
6:09 PM Thursday 6 - November 2025

ಆಟೋಗೆ ಡಿಕ್ಕಿ ಹೊಡೆದ ಟ್ರಕ್: 12 ಮಂದಿಯ ದಾರುಣ ಸಾವು

shahjahanpur road accident
25/01/2024

ಉತ್ತರಪ್ರದೇಶ:  ಟ್ರಕ್ ವೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ 12 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಾಜಾನ್ ಪುರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಫಾರೂಖಾಬಾದ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು,  ಮಂಜು ಮುಸುಕಿದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಅಲ್ಲಾಗ್ ಗಂಜ್ ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದ ವಿಚಾರ ತಿಳಿದು ಸಿಎಂ ಯೋಗಿ ಆದಿತ್ಯನಾಥ್ ತೀವ್ರ ದುಃಖ ವ್ಯಕ್ತಪಡಿಸಿದ್ದು, 12 ಮಂದಿಯ ಕುಟುಂಬಸ್ಥರಿಗೂ ಸಾಂತ್ವನ ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆ ನೀಡಬೇಕು, ಮೃತರ ಕುಟುಂಬಗಳಿಗೆ ಸಾಧ್ಯವಾಗುವ ಎಲ್ಲ ನೆರವುಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ