ಶಾಲೆ ಆರಂಭ ಯಾವಾಗ? ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು? - Mahanayaka
10:45 AM Saturday 23 - August 2025

ಶಾಲೆ ಆರಂಭ ಯಾವಾಗ? ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

suresh kumar
04/06/2021


Provided by

ಬೆಂಗಳೂರು: ಕೊವಿಡ್ ಅಲೆಯ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದ ಆರಂಭದ ಬಗ್ಗೆ ಸಾಕಷ್ಟು ಗೊಂದಲಗಳಿದ್ದವು ಆದರೆ, ರಾಜ್ಯ ಸರ್ಕಾರವು ಜುಲೈ 1ರಿಂದ ಶಾಲೆಗಳು ಆರಂಭವಾಗಲಿದೆ ಎಂದು ತಿಳಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿರುವ  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್, ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಜೂನ್‌ 15ರಿಂದ ದಾಖಲಾತಿ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕೋವಿಡ್‌ ಪರಿಸ್ಥಿತಿ ಗಮನಿಸಿ, ಆನ್‌ ಲೈನ್‌ ಅಥವಾ ಭೌತಿಕ ತರಗತಿಗಳನ್ನು ನಡೆಸುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಪೋಷಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಸಚಿವರು ಭರವಸೆ ನೀಡಿದರು.

ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಸಂಬಂಧಿಸಿದ ವಿವಾದ ಹೈಕೋರ್ಟ್‌ ಮುಂದೆ ಇದೆ. ಅಲ್ಲಿ ಸರ್ಕಾರದ ಪರ ವಾದವನ್ನು ಮಂಡಿಸಲಾಗಿದೆ. ನ್ಯಾಯಾಲಯ ಶೀಘ್ರ ತೀರ್ಪು ನೀಡಿದಲ್ಲಿ ಎಲ್ಲಾ ಗೊಂದಲಗಳಿಗೆ ಉತ್ತರ ದೊರೆಯಲಿದೆ ಎಂದು ಮಾಹಿತಿ ನೀಡಿದರು.

 

ಇತ್ತೀಚಿನ ಸುದ್ದಿ