11:54 AM Saturday 17 - January 2026

ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

raziq
02/12/2021

ಉಳ್ಳಾಲ: ಶಾಲೆಗೆ ತೆರಳುತ್ತಿದ್ದ ಬಾಲಕಿ ಹಾಗೂ 19 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಸಿಬಿ ಹಾಗೂ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ 22 ವರ್ಷ ವಯಸ್ಸಿನ ರಾಝಿಕ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ 14 ವರ್ಷ ವಯಸ್ಸಿನ ಬಾಲಕಿ ತನ್ನ ತಂಗಿಯೊಂದಿಗೆ ತಲಪಾಡಿ ಅಲಂಕಾರ ಗುಡ್ಡೆಯಿಂದ ತಲಪಾಡಿ ಚೆಕ್ ಪೋಸ್ಟ್ ರಸ್ತೆಯಾಗಿ ನಡೆದುಕೊಂಡು ಶಾಲೆಗೆ ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಬಾಲಕಿಯ ಕೈ ಹಿಡಿದೆಳೆದು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನೊಂದು ಘಟನೆಯಲ್ಲಿ ಅದೇ ದಿನ ಬೆಳಗ್ಗೆ ಉಚ್ಚಿಲದಲ್ಲಿ ಕಾಲೇಜಿಗೆ ಹೋಗುತ್ತಿದ್ದ 19 ವರ್ಷ ವಯಸ್ಸಿನ ಯುವತಿಯೊಬ್ಬಳಿಗೂ ಇದೇ ರೀತಿಯಾಗಿ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಎರಡೂ ದೂರಿನ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿ ಕ್ಯಾಮರಾ ಆಧಾರದಲ್ಲಿ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಗುರುವಾರ ಬೆಳಗ್ಗೆ ಕೆ.ಸಿ.ರೋಡ್ ಬಲ್ಲಿ ಆರೋಪಿ ರಾಝಿಕ್ ನನ್ನು ಬಂಧಿಸಿದ್ದು, ಆರೋಪಿಯ ವಿರುದ್ಧ ಪೋಕ್ಸೊ ಸೇರಿದಂತೆ ಎರಡು ಪ್ರಕರಣ ದಾಖಲಾಗಿವೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವೋಡಾಫೋನ್ – ಐಡಿಯಾ ವಿರುದ್ಧ ಕೇಸ್ ದಾಖಲಿಸಿದ ಜಿಯೋ!

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಚಿಂತಾಜನಕ

ಒಕ್ಕಲಿಗರ ಸಂಘದ ಚುನಾವಣೆ: ಆಮಿಷ ಒಡ್ಡಿ ಮತಬೇಡುವವರನ್ನು ಬೆಂಬಲಿಸಬೇಡಿ | ಯುವ ಮುಖಂಡ ಸಚಿನ್ ಸರಗೂರು

ಗಲ್ಫ್ ನಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ: ದೃಢಪಡಿಸಿದ ಸೌದಿ ಅರೇಬಿಯಾ

‘ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌’: ಹಂಸಲೇಖ ಸಂಯೋಜನೆಯ ಸಂವಿಧಾನ ಗೀತೆ ವೈರಲ್

ಕ್ಲಾಸ್ ರೂಮ್ ಗೆ ನುಗ್ಗಿ ಗುಂಡಿನ ಮಳೆ ಸುರಿಸಿದ ಹೈಸ್ಕೂಲ್ ವಿದ್ಯಾರ್ಥಿ: 3 ಮಂದಿ ಸಾವು, 6 ಜನರಿಗೆ ಗಾಯ

ಇತ್ತೀಚಿನ ಸುದ್ದಿ

Exit mobile version