ನೀಚ ಕೃತ್ಯ: ಶಾಲೆಯ ಕಿಟಕಿಗೆ ಬಿಯರ್ ಬಾಟಲಿ ಎಸೆದ ಕಿಡಿಗೇಡಿಗಳು - Mahanayaka

ನೀಚ ಕೃತ್ಯ: ಶಾಲೆಯ ಕಿಟಕಿಗೆ ಬಿಯರ್ ಬಾಟಲಿ ಎಸೆದ ಕಿಡಿಗೇಡಿಗಳು

chikkaballapur crime news
28/08/2021

ಚಿಕ್ಕಬಳ್ಳಾಪುರ: ಮದ್ಯಪಾನ ಮಾಡಿ ಖಾಸಗಿ ಶಾಲೆಯ ಕಿಟಕಿಯೊಳಗೆ ಬಿಯರ್ ಬಾಟಲಿ ಎಸೆದ ನೀಚ ಕೃತ್ಯ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದ್ದು, ಮಧ್ಯ ರಾತ್ರಿ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಈ ನೀಚ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ನಗರದ ಕೋಟೆ ವೃತ್ತದಲ್ಲಿರುವ ಆಕಾಶ್ ಗ್ಲೋಬಲ್ ಶಾಲೆಯ ಕಿಟಕಿಗೆ ಬಿಯರ್ ಬಾಟಲಿಯನ್ನು ಎಸೆದಿದ್ದು, ಪರಿಣಾಮವಾಗಿ ಕಿಟಕಿ ಗಾಜು ಪುಡಿಯಾಗಿದ್ದು, ಬಾಟಲಿ ಹಾಗೂ ಕಿಟಕಿಯ ಗ್ಲಾಸ್ ನ ಚೂರುಗಳು ಸ್ಥಳದಲ್ಲಿ ತುಂಬಿಕೊಂಡಿವೆ.

ಈ ಹಿಂದೆಯೂ ಇದೇ ರೀತಿಯ ಕೃತ್ಯ ನಡೆಸಲಾಗಿತ್ತು ಎಂದು ಇಲ್ಲಿನ ಶಿಕ್ಷಕರು ಹೇಳುತ್ತಿದ್ದು, ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿರುವುದರಿಂದಾಗಿ ಶಿಕ್ಷಕರು ಆತಂಕಕ್ಕೀಡಾಗಿದ್ದಾರೆ.  ಕಿಟಕಿಗೆ ಬಾಟಲಿ ಎಸೆದ ಪರಿಣಾಮ ಶಾಲೆಯ ಪ್ರವೇಶ ದ್ವಾರದ ಮುಂಭಾಗ ಹಾಗೂ ಆಡಳಿತ ಕಚೇರಿಯೊಳಗೆ ಗಾಜಿನ ಚೂರು ತುಂಬಿವೆ.


Provided by

ಈ ಘಟನೆ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸರು ತಕ್ಷಣವೇ ಎಚ್ಚೆತ್ತುಕೊಂಡು ಕ್ರಮಕೈಗೊಳ್ಳಬೇಕಿದೆ. ಪುಂಡರ ಕಾಟ ಈ ಪ್ರದೇಶದಲ್ಲಿ ಹೆಚ್ಚಾಗುತ್ತಿದ್ದು, ಪೊಲೀಸರು ಈಗಲೇ ಈ ಬಗ್ಗೆ ಗಮನ ಹರಿಸಬೇಕು. ಈ ಮೂಲಕ ಇಲ್ಲಿ ಮುಂದೆ ನಡೆಯಬಹುದಾದ ಅಪರಾಧ ಚಟುವಟಿಕೆಗಳನ್ನು ಈಗಲೇ ತಡೆಯಬೇಕಿದೆ ಎನ್ನುವ ಒತ್ತಾಯಗಳು ಕೇಳಿ ಬಂದಿವೆ.

ಇನ್ನಷ್ಟು ಸುದ್ದಿಗಳು…

ವಿಮಾನದೊಳಗೆ ಸಿಗರೇಟ್ ಸೇದಿದ ಮಹಿಳೆ: ಸಹ ಪ್ರಯಾಣಿಕರು ವಿರೋಧಿಸಿದರೂ ಕ್ಯಾರೇ ಅನ್ನಲಿಲ್ಲ

ಮಮತಾ ಬ್ಯಾನರ್ಜಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಾಧ್ಯಾಪಕ!

ಮದುವೆಯಾದ ಮೂರೇ ದಿನದಲ್ಲಿ ಮದುಮಗಳು ಸಾವು: ಸಂಭ್ರಮದ ಮನೆಯಲ್ಲಿ ಮಡುಗಟ್ಟಿದ ಶೋಕ

ಸಾಮೂಹಿಕ ಅತ್ಯಾಚಾರ ಪ್ರಕರಣ: ಬಂಧಿತ ಐದು ಮಂದಿಯ ಪೈಕಿ ಓರ್ವ ಅಪ್ರಾಪ್ತ ವಯಸ್ಕ

ಬೆತ್ತಲೆ ವಿಡಿಯೋ ಕಾಲ್ ಮಾಡಿದ ಯುವತಿ, ಆಟೋ ಚಾಲಕನನ್ನೂ ಬೆತ್ತಲೆಗೊಳಿಸಿ ವಿಡಿಯೋ ವೈರಲ್ ಮಾಡಿಸಿದಳು!

ಅಮಾನವೀಯ ಘಟನೆ: ಪತ್ನಿಯ ಖಾಸಗಿ ಅಂಗಕ್ಕೆ ಸೂಜಿದಾರದಿಂದ ಹೊಲಿಗೆ ಹಾಕಿದ ಪತಿ

ಅನಿಷ್ಟ ಕಾಮುಕರನ್ನು ಬಂಧಿಸುವ, ಶಿಕ್ಷಿಸುವ ಕಾನೂನು ಗಟ್ಟಿಯಾಗಬೇಕು | ನಟಿ ಶೃತಿ

126 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ವಿಮಾನದ ಪೈಲಟ್ ಗೆ ಹೃದಯಾಘಾತ: ಮುಂದೆ ನಡೆದದ್ದೇನು?

ಇತ್ತೀಚಿನ ಸುದ್ದಿ