10:38 AM Saturday 23 - August 2025

ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸುತ್ತೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

siddaramaiha
20/03/2022

ಮಂಗಳೂರು: ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸುತ್ತೇನೆ. ನೈತಿಕ ವಿಚಾರ ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ ಎಂದು ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕೊಡಬೇಕು. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನೂ ವಿರೋಧಿಸಲ್ಲ ಎಂದರು.

ದಿ ಕಾಶ್ಮೀರ್ ಫೈಲ್ಸ್ ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ ಅವರು, ಯಾವ ಸಿನಿಮಾನಾದ್ರೂ ತೋರಿಸಲಿ, ಸತ್ಯ ತೋರಿಸಲಿ. ಕಾಶ್ಮೀರದಲ್ಲಿ ಯಾರಿಗೆ ಸಮಸ್ಯೆ ಆಗಿತ್ತೆಂದು ಹೇಳಬೇಕು. ಕಾಶ್ಮೀರದಲ್ಲಿ ಉಗ್ರರ ಕೃತ್ಯ, ಕಾಶ್ಮೀರ ಪಂಡಿತರ ಸಮಸ್ಯೆ, ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಎಂಬುದನ್ನು ಹೇಳಬೇಕು. ಆಗ ಅಲ್ಲಿ ಯಾರ ಸರ್ಕಾರವಿತ್ತು, ಸರ್ಕಾರ ಏನು ಮಾಡಿತು. ಗುಜರಾತ್ ಘಟನೆ, ಲಖೀಂಪುರ ಘಟನೆ ಎಲ್ಲವೂ ತೋರಿಸಲಿ. ನಾನು ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡುವುದು ಕಡಿಮೆ. ನಾನು ದಿ ಕಾಶ್ಮೀರ್ ಫೈಲ್ಸ್ ನೋಡುವುದಿಲ್ಲ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸುತ್ತೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಯುಪಿ ಸಿಎಂ ಆಗಿ ಮಾರ್ಚ್ 25ರಂದು ಯೋಗಿ ಪ್ರಮಾಣ ವಚನ

ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ: ಆರೋಪಿಗಳ ಬಂಧನ

ರಮೇಶ್ ಜಾರಕಿಹೊಳಿ ಮೇಲೆ ಇರುವ ಸಿಡಿ ಪ್ರಕರಣ ಕ್ಲಿಯರ್‌ ಆಗುತ್ತೆ: ಬಾಲಚಂದ್ರ ಜಾರಕಿಹೊಳಿ ವಿಶ್ವಾಸ

ಇತ್ತೀಚಿನ ಸುದ್ದಿ

Exit mobile version