ಗುಜರಾತ್ ಸರ್ಕಾರಕ್ಕೆ ಮುಖಭಂಗ: ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳು ಮತ್ತೆ ಜೈಲಿಗೆ - Mahanayaka

ಗುಜರಾತ್ ಸರ್ಕಾರಕ್ಕೆ ಮುಖಭಂಗ: ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳು ಮತ್ತೆ ಜೈಲಿಗೆ

bilkis bano
08/01/2024


Provided by

ದೆಹಲಿ: ಬಿಲ್ಕಿಸ್ ಬಾನು ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಮಗು ಮತ್ತು ಕುಟುಂಬದವರನ್ನು ಕೊಂದ 11 ಅಪರಾಧಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯು ಮಾನ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಅರ್ಜಿ ವಿಚಾರಣೆ ಮುಂದುವರಿಯುವುದು ಎಂದು ಸುಪ್ರೀಂ ಹೇಳಿದೆ.

ಇದರ ಜತೆಗೆ ಅಪರಾಧಿಗಳನ್ನು ಮತ್ತೆ ಜೈಲಿಗೆ ಹಾಕುವಂತೆ ಹೇಳಿದೆ. ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಈ ಆದೇಶವನ್ನು ನೀಡಿದ್ದಾರೆ.

ಗುಜರಾತ್ ಸರ್ಕಾರವು 11 ಅಪರಾಧಿಗಳ ಬಿಡುಗಡೆ ಮಾಡಲು ಸಮರ್ಥವಾಗಿಲ್ಲ, ಈ ನಿರ್ಧಾರವು ಮಹಾರಾಷ್ಟ್ರ ಸರ್ಕಾರಕ್ಕೆ ಬಿಟ್ಟದ್ದು ಎಂದು ಹೇಳಿದೆ. ಈ ಬಿಡುಗಡೆ ಆದೇಶದಲ್ಲಿ ಸಾಮರ್ಥ್ಯದ ಕೊರತೆ ಇದೆ ಎಂದು ಕೋರ್ಟ್ ಹೇಳಿದೆ. ಆ ಕಾರಣದಿಂದ ಈ ಬಿಡುಗಡೆ ಆದೇಶವನ್ನು ರದ್ದುಗೊಳಿಸುವುದಾಗಿ ಹೇಳಿದೆ.

ಇತ್ತೀಚಿನ ಸುದ್ದಿ