ರಾಹುಲ್ ಗಾಂಧಿ ಭಾಷಣವನ್ನು ಬೆಂಬಲಿಸಿದ ಶಂಕರಾಚಾರ್ಯ ಸ್ವಾಮಿ: ಬಿಜೆಪಿಗೆ ಮುಜುಗರ

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣವನ್ನು ಜ್ಯೋತಿರ್ಮಠದ 46ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಬೆಂಬಲಿಸುವ ಮೂಲಕ ಬಿಜೆಪಿಗೆ ತೀವ್ರ ಮುಜುಗರ ತರಿಸಿದ್ದಾರೆ. ರಾಹುಲ್ ಗಾಂಧಿಯ ಭಾಷಣದ ಒಂದು ಭಾಗವನ್ನು ಮಾತ್ರ ಹರಡುವುದು ಸರಿಯಲ್ಲ ಮತ್ತು ಇದಕ್ಕೆ ಕಾರಣರಾದವರಿಗೆ ಶಿಕ್ಷೆ ಆಗಬೇಕು ಎಂದು ಅವರು ಆಗ್ರಹಿಸುವ ಮೂಲಕ ಇಂಥ ಕೆಲಸದಲ್ಲಿ ತೊಡಗಿರುವವರಿಗೆ ಹಿನ್ನಡೆಯಾಗುವಂತೆ ಮಾಡಿದ್ದಾರೆ.
ಲೋಕಸಭೆಯಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿಯವರು ಬಿಜೆಪಿ ನಾಯಕರು ಕೋಮುವಾದದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು,
ರಾಹುಲ್ ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಬಣ್ಣಿಸಿದ್ದಾರೆ ಎಂದು ವ್ಯಾಖ್ಯಾನಿಸಿದ್ದರು. ಇದೀಗ ಅವಿಮುಕ್ತೇಶ್ವರಾನಂದ ಸ್ವಾಮೀಜಿ ಅವರು ಪ್ರಧಾನಿಯವರ ಹೇಳಿಕೆಯನ್ನು ತಿರಸ್ಕರಿಸಿದ್ದು ರಾಹುಲ್ ಗಾಂಧಿ ಹಿಂದೂ ಧರ್ಮದಲ್ಲಿ ಹಿಂಸೆಗೆ ಅವಕಾಶ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದರು. ಮಾತ್ರವಲ್ಲ ರಾಹುಲ್ ಭಾಷಣದ ಒಂದು ಭಾಗವನ್ನು ಮಾತ್ರ ಹರಡುವುದು ಸರಿಯಲ್ಲ ಎಂದು ಕೂಡ ಅವರು ತಿರುಗೇಟು ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth