ಶರಣ್ ಪಂಪ್ ವೆಲ್ ವಿವಾದಾತ್ಮಕ ಹೇಳಿಕೆ: ನ್ಯಾಯಾಂಗ ತನಿಖೆಗೆ ಜೆಡಿಎಸ್ ಒತ್ತಾಯ - Mahanayaka
10:16 PM Thursday 15 - January 2026

ಶರಣ್ ಪಂಪ್ ವೆಲ್ ವಿವಾದಾತ್ಮಕ ಹೇಳಿಕೆ: ನ್ಯಾಯಾಂಗ ತನಿಖೆಗೆ ಜೆಡಿಎಸ್ ಒತ್ತಾಯ

sharan pumpwell
30/01/2023

ರಾಜ್ಯದ ತುಮಕೂರಿನಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಗೆ ಪ್ರತೀಕಾರವಾಗಿ ಹಿಂದೂತ್ವ ಸಂಘಟನೆಯ ಕಾರ್ಯಕರ್ತರೇ ಮಂಗಳೂರಲ್ಲಿ  ಫಾಝಿಲ್‌ನನ್ನು ಕೊಲೆ ಮಾಡಿರುವುದಾಗಿ ಬಹಿರಂಗ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಹೇಳಿಕೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷ ನಝೀರ್ ಉಳ್ಳಾಲ್ ಒತ್ತಾಯಿಸಿದ್ದಾರೆ.

ರಾಜ್ಯ ಬಿಜೆಪಿ ಸರಕಾರವು ಹಿಂದೂತ್ವವಾದಿ ಸಂಘಟನೆಗೆ ಬೆಂಬಲ ನೀಡುತ್ತಿರುವುದರಿಂದ ಪೊಲೀಸ್ ಇಲಾಖೆಯ ತನಿಖೆಯಲ್ಲಿ ನಿಷ್ಪಕ್ಷಪಾತ ಕಾಣಿಸದು. ಸರಕಾರಿ ಅಧೀನದ ತನಿಖಾ ಸಂಸ್ಥೆಗಳಿಂದ ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ನ್ಯಾಯಾಂಗ ತನಿಖೆಯ ಅಗತ್ಯವಿದೆ. ಹಿಂದೂ ಮತ್ತು‌‌ ಮುಸ್ಲಿಮರ ಮಧ್ಯೆ ವೈಷಮ್ಯದ ವಿಷ ಬೀಜ ಬಿತ್ತುವ‌ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ