ಕೊಲ್ಲೂರು ಅರಸಿನಗುಂಡಿ ಜಲಪಾತ ದುರ್ಘಟನೆ: ವಾರದ ಬಳಿಕ ಶರತ್ ಮೃತದೇಹ ಪತ್ತೆ

ಉಡುಪಿ: ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋದ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್.ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತದೇಹ ವಾರದ ಬಳಿಕ ಇಂದು ಬೆಳಗ್ಗೆ ಪತ್ತೆಯಾಗಿದೆ.
ಜಲಪಾತದ ಬಳಿ ಶರತ್ ಬಿದ್ದ ಸಮೀಪದ ಕಲ್ಲು ಪೊಟರೆಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ತಿಳಿದು ಬಂದಿದೆ. ಜುಲೈ 23ರ ರವಿವಾರ ಈ ಘಟನೆ ನಡೆದಿತ್ತು. ಜಲಪಾತ ವೀಕ್ಷಣೆ ಮಾಡುತ್ತಿದ್ದಾಗಲೇ ಶರತ್ ಕಾಲು ಜಾರಿ ನೀರಿನಲ್ಲಿ ಕೊಚ್ಚಿಹೋಗಿದ್ದರು. ಅವರೊಂದಿಗಿದ್ದ ಸ್ನೇಹಿತ ಮಾಹಿತಿ ನೀಡಿದ ತರುವಾಯ ಆತನ ಪತ್ತೆಗೆ ಶೋಧ ಕಾರ್ಯ ಬಿರುಸುಗೊಂಡಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw