ಕಾಶ್ಮೀರದ ಸಮಸ್ಯೆಗಳನ್ನು ಮೋದಿ ಬಗೆಹರಿಸುತ್ತಾರೆ ಎಂದು ಮೆಹಬೂಬಾ ಮುಫ್ತಿ ಹೊಗಳುತ್ತಿದ್ರು: ಈಗ ಬಿಜೆಪಿಯನ್ನು ಏಕೆ ವಿರೋಧಿಸುತ್ತಿದ್ದಾರೆ ಎಂದ ಒಮರ್ ಅಬ್ದುಲ್ಲಾ

ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಬಿಜೆಪಿಯ ಮಿತ್ರರಾಗಿದ್ದರು ಮತ್ತು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುತ್ತಿದ್ದರು ಎಂದು ಹೇಳಿದ್ದಾರೆ. “ಮೆಹಬೂಬಾ ಮುಫ್ತಿ ಬಿಜೆಪಿಯ ಮಿತ್ರರಾಗಿದ್ದಾಗ ಮತ್ತು ಅಧಿಕಾರದಲ್ಲಿದ್ದಾಗ, ಅವರು ಯಾವಾಗಲೂ ಪ್ರಧಾನಿ ಮೋದಿಯವರನ್ನು ಹೊಗಳುತ್ತಿದ್ದರು. ಅವರು ಈಗ ಬಿಜೆಪಿಯನ್ನು ಏಕೆ ವಿರೋಧಿಸುತ್ತಿದ್ದಾರೆ?” ಎಂದು ಅಬ್ದುಲ್ಲಾ ಪ್ರಶ್ನಿಸಿದ್ದಾರೆ.
ಕಾಶ್ಮೀರದ ಇಂಡಿಯಾ ಬಣದಲ್ಲಿ ಎಲ್ಲವೂ ಸರಿಯಿಲ್ಲ. ಇಂಡಿಯಾ ಬ್ಲಾಕ್ ನ ಸದಸ್ಯರಾದ ಎನ್ಸಿ ಮತ್ತು ಪಿಡಿಪಿ ಎರಡೂ ಪರಸ್ಪರ ಗುರಿಯಾಗಿಸಿಕೊಂಡಿವೆ. ತಮ್ಮ ಚುನಾವಣಾ ಪ್ರಚಾರವನ್ನು ಮುಂದುವರಿಸಿದ ಒಮರ್ ಅಬ್ದುಲ್ಲಾ, ಪಿಡಿಪಿ ಅಧ್ಯಕ್ಷೆ ಮತ್ತು ಅನಂತ್ನಾಗ್-ರಾಜೌರಿ ಅಭ್ಯರ್ಥಿ ಮೆಹಬೂಬಾ ಮುಫ್ತಿ ಅವರನ್ನು ಗುರಿಯಾಗಿಸಿಕೊಂಡು, “ಮೆಹಬೂಬಾ ಮುಫ್ತಿ ಅಧಿಕಾರದಲ್ಲಿದ್ದಾಗ, ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ನಿರಂತರವಾಗಿ ಹೊಗಳುತ್ತಿದ್ದರು ಮತ್ತು ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಹೇಳುತ್ತಿದ್ದರು, ಆದರೆ ಯಾವುದೇ ಸಮಸ್ಯೆ ಬಗೆಹರಿದಿಲ್ಲ ಎಂದು ಕಿಡಿಕಾರಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth