6:48 AM Wednesday 15 - October 2025

ಶೀಲ ಶಂಕಿಸಿ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಪತಿ | ಹತ್ಯೆಗೀಡಾದ ಮಹಿಳೆ ಆಶಾ ಕಾರ್ಯಕರ್ತೆ

18/01/2021

ಮೈಸೂರು: ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ, ಆಕೆಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಘಟನೆ ಹುಣಸೂರಿನಲ್ಲಿ ನಡೆದಿದ್ದು, ಮನೆಯಲ್ಲಿಯೇ ಈ ಕೃತ್ಯ ನಡೆಸಿರುವ  ಆರೋಪಿ ಪತ್ನಿಯನ್ನು ಉಸಿರುಕಟ್ಟಿಸಿ ಹತ್ಯೆಗೈದಿದ್ದಾನೆ.

ಹುಣಸೂರಿನ ಕಲ್ಕುಣಿಕೆ ಮಾರಿಗುಡಿ ಬೀದಿ ನಿವಾಸಿ ರವಿ ಎಂಬಾತ ಈ ಕೃತ್ಯವನ್ನು ಎಸಗಿದ್ದು, ಈತನ ಪತ್ನಿ ಸೌಮ್ಯ(31) ಹತ್ಯೆಗೀಡಾದವರಾಗಿದ್ದಾರೆ.  ಹತ್ಯೆಗೀಡಾದ ಸೌಮ್ಯ ಮಂಡ್ಯದ ಸಾತನೂರು ಗ್ರಾಮದವರಾಗಿದ್ದಾರೆ. 11 ವರ್ಷಗಳ ಹಿಂದೆ ರವಿಯನ್ನು ವಿವಾಹವಾಗಿದ್ದರು. ಆಶಾ ಕಾರ್ಯಕರ್ತೆಯಾಗಿ ಅವರು ಕೆಲಸ ಮಾಡುತ್ತಿದ್ದರು.

ಈ ದಂಪತಿಗೆ 9 ಹಾಗೂ 7 ವರ್ಷದ ಎರಡು ಗಂಡು ಮಕ್ಕಳು ಕೂಡ ಇದ್ದಾರೆ. ಕಳೆದ 6 ತಿಂಗಳಿನಿಂದ ಪತ್ನಿಯ ಅನೈತಿಕ ಸಂಬಂಧದ ವಿಚಾರವಾಗಿ ರವಿ ಜಗಳವಾಡುತ್ತಿದ್ದ ಎನ್ನಲಾಗಿದೆ.  ಪತ್ನಿ ನಿದ್ದೆ ಮಾಡುತ್ತಿದ್ದ ಸಂದರ್ಭದಲ್ಲಿ ರವಿ ಕುತ್ತಿಗೆಯ ಮೇಲೆ ಕಾಲು ಅದುಮಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಮೃತ ಸೌಮ್ಯ ಅವರ ಅಣ್ಣ ಮಹೇಶ್,  ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ರವಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version