ಪಾಕಿಸ್ತಾನದಿಂದ ಶೆಲ್ ದಾಳಿ: ಐಎಎಫ್ ಸರ್ಜೆಂಟ್ ಮತ್ತು ಬಿಎಸ್’ಎಫ್’ಎಸ್’ಐ ಹುತಾತ್ಮ

ಜಮ್ಮು: ಜಮ್ಮು ಪ್ರದೇಶವನ್ನು ಗುರಿಯಾಗಿಸಿ ಪಾಕಿಸ್ತಾನ ನಡೆಸಿದ ತೀವ್ರ ಶೆಲ್ ದಾಳಿ ಮತ್ತು ಡ್ರೋನ್ ದಾಳಿಯ ಪರಿಣಾಮ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಒಬ್ಬರು ಐಎಎಫ್ ಹಾಗೂ ಬಿಎಸ್‌ಎಫ್ ಸಬ್-ಇನ್ಸ್‌ಪೆಕ್ಟರ್ ಹುತಾತ್ಮರಾದ ಯೋಧರಾಗಿದ್ದಾರೆ. ಪೂಂಚ್ ನ ಕೃಷ್ಣ ಘಾಟಿ ಸೆಕ್ಟರ್ ನಲ್ಲಿರುವ ತಮ್ಮ ಪೋಸ್ಟ್ ಬಳಿ ಫಿರಂಗಿ ಶೆಲ್ ಸ್ಫೋಟಗೊಂಡು ಹಿಮಾಚಲ ಪ್ರದೇಶದ ಜೆಸಿಒ ಸುಬೇದಾರ್ ಮೇಜರ್ ಪವನ್ ಕುಮಾರ್ ಶನಿವಾರ ಬೆಳಿಗ್ಗೆ ಹುತಾತ್ಮರಾಗಿದ್ದಾರೆ.
ಆರ್ ಎಸ್ ಪುರ ಸೆಕ್ಟರ್ ನಲ್ಲಿ ರಾತ್ರಿಯಿಡೀ ನಡೆದ ಗುಂಡಿನ ದಾಳಿ ಮತ್ತು ಶೆಲ್ ದಾಳಿ ಪರಿಣಾಮ ಜೆ & ಕೆ ಲೈಟ್ ಇನ್ ಫೆಂಟ್ರಿಯ 25 ವರ್ಷದ ರೈಫಲ್ ಮನ್ ಸುನಿಲ್ ಕುಮಾರ್ ಹುತಾತ್ಮರಾಗಿದ್ದಾರೆ.
ಐಎಎಫ್ ನ 36 ವಿಂಗ್ ಗೆ ಸೇರಿದ 36 ವರ್ಷದ ವೈದ್ಯಕೀಯ ಸಹಾಯಕ ಸಾರ್ಜೆಂಟ್ ಸುರೇಂದ್ರ ಕುಮಾರ್ ಮೋಗಾ, ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಪಾಕಿಸ್ತಾನದ ಸೇನೆಯ ದಾಳಿಯ ಪರಿಣಾಮ ಹುತಾತ್ಮರಾಗಿದ್ದಾರೆ. ಮೂಲತಃ ಬೆಂಗಳೂರಿನಲ್ಲಿ ಪೋಸ್ಟ್ ಮಾಡಲಾಗಿದ್ದ ಅವರನ್ನು ನಾಲ್ಕು ದಿನಗಳ ಹಿಂದೆ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಉಧಂಪುರಕ್ಕೆ ಮರು ನಿಯೋಜಿಸಲಾಗಿತ್ತು.
ಆರ್ ಎಸ್ ಪುರ ಸೆಕ್ಟರ್ ನ ಅಂತರರಾಷ್ಟ್ರೀಯ ಗಡಿಯಲ್ಲಿ ನಿಯೋಜಿಸಲಾಗಿದ್ದ ಬಿಎಸ್ ಎಫ್ ಘಟಕದ ಮೇಲೆ ಪಾಕಿಸ್ತಾನದ ಭಾರೀ ಗುಂಡಿನ ದಾಳಿ ನಡೆಸಿದ್ದು, ಪರಿಣಾಮವಾಗಿ ಸಬ್–ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತಿಯಾಝ್ ಹುತಾತ್ಮರಾಗಿದ್ದಾರೆ.
ಈ ಘಟನೆಯಲ್ಲಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಇತರರ ಆರೋಗ್ಯ ಸ್ಥಿರವಾಗಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: