ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ - Mahanayaka
11:14 AM Thursday 15 - January 2026

ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ

vijayakumar
10/11/2021

ಬೀದರ್: ಪ್ರಾಥಮಿಕ ಶಾಲೆಯೊಂದರ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ನ ಔರಾದ್ ಪಟ್ಟಣದಲ್ಲಿ ಈ ಭೀಕರ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.

ಬೀದರ್ ಜಿಲ್ಲೆಯ ಔರಾದ್ ನ ಲಿಡ್ಕರ್ ಕಾಲನಿ ನಿವಾಸಿ 46 ವರ್ಷ ವಯಸ್ಸಿನ ವಿಜಯ್ ಕುಮಾರ್ ಟೀಳೆಕರ್ ಹತ್ಯೆಗೀಡಾದ ಶಿಕ್ಷಕ ಎಂದು ಗುರುತಿಸಲಾಗಿದೆ. ಇವರು ಔರಾದ್ ನ ಕರಂಜಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಎಸ್ ಪಿ ಡಿ.ಎಲ್.ನಾಗರಾಜ್, ಎಎಸ್ ಪಿ ಪೃಥ್ವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಮಾಡಿದ್ದು ಯಾರು? ಹತ್ಯೆಗೆ ಕಾರಣ ಏನು ಎನ್ನುವುದು ಪೊಲೀಸ್ ತನಿಖೆಯಿಂದಲೇ ತಿಳಿದು ಬರಬೇಕಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ