ಶಿರೂರು: ಪೊಲೀಸ್ ವಾಹನ ಸಹಿತ ನಾಲ್ಕು ಬೈಕ್ ಗಳಿಗೆ ಲಾರಿ ಡಿಕ್ಕಿ: ಓರ್ವ ಸಾವು
ಬೈಂದೂರು: ಲಾರಿಯೊಂದು ಪೊಲೀಸ್ ವಾಹನ ಹಾಗೂ ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ 9:15ರ ಸುಮಾರಿಗೆ ಶಿರೂರು ಗ್ರಾಮದ ನಿರಗಡ್ಡೆ ಶಿವಸಾಗರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಶಿರೂರಿನ ನಾಗೇಂದ್ರ ಮಲ್ಯ(45) ಎಂದು ಗುರುತಿಸಲಾಗಿದೆ.
ನಿರಗಡ್ಡೆ ಶಿವಸಾಗರ ಬಳಿ ಲಾರಿ ಮಗುಚಿ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹೈವೇ ಪಟ್ರೋಲ್ ಪೊಲೀಸರು ವಾಹನವನ್ನು ನಿಲ್ಲಿಸಿ ಬ್ಯಾರಿಕೇಡ್ ಅಳವಡಿಸಿ ವಾಹನಗಳ ಸುಗಮ ಸಂಚಾರಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಕೇರಳದಿಂದ ಮಹಾರಾಷ್ಟ್ರಕ್ಕೆ ರಬ್ಬರ್ ಸಾಗಿಸುತ್ತಿದ್ದ ಲಾರಿಯನ್ನು ಚಾಲಕ ಕಣ್ಣನ್ ಅತೀ ವೇಗ ಮತ್ತು ಅಜಾಗರೂಕತೆಯಿಂದ ತಿರುವು ಇಳಿಜಾರು ರಸ್ತೆಯಲ್ಲಿ ಚಲಾಯಿಸಿಕೊಂಡು ಬಂದಿದ್ದಾನೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ರಾಷ್ಟ್ರೀಯ ಹೆದ್ದಾರಿಯ ಬದಿ ನಿಲ್ಲಿಸಿದ್ದ ಮೂರು ಬೈಕ್ ಗಳ ಮೇಲೆ ಹತ್ತಿಕೊಂಡು ಬಳಿಕ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಮುಂದುವರಿದು ಲಾರಿಯು ಮಣ್ಣು ರಸ್ತೆಯ ಬದಿಯಲ್ಲಿ ನಿಂತಿದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಿಂದ ಪೊಲೀಸ್ ವಾಹನ ಸೇರಿದಂತೆ ಐದು ವಾಹನಗಳು ಜಖಂಗೊಂಡಿವೆ. ಗಂಭೀರ ಗಾಯಗೊಂಡಿದ್ದ ಬೈಕೊಂದರ ಸವಾರ ನಾಗೇಶ್ ಮಲ್ಯರನ್ನು ಬೈಂದೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತೂ ದಾರಿಯಲ್ಲಿ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























