1:51 PM Thursday 16 - October 2025

ಶಿವಸೇನಾ ಮುಖಂಡನನ್ನು ಗುಂಡಿಕ್ಕಿ ಹತ್ಯೆ!

26/10/2020

ಮುಂಬೈ: ಶಿವಸೇನೆ ಮುಖಂಡನೋರ್ವನನ್ನು ಸೋಮವಾರ ಬೆಳಗ್ಗೆ ದುಷ್ಕರ್ಮಿಗಳು ಗುಂಡುಕ್ಕಿ ಹತ್ಯೆಗೈದಿದ್ದಾರೆ. ಮೃತರನ್ನು ಲೋನಾವಲಾದ ಶಿವಸೇನೆ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಉಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ.

 


ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನನ್ನು ಬಂಧಿಸಲಾಗಿದೆ. ಬೆಳಗ್ಗೆ ಸುಮಾರು 9.30ಕ್ಕೆ ಗುಂಡಿನ ದಾಳಿ ನಡೆಸಲಾಗಿದೆ. ತೀರಾ ಸಮೀಪದಿಂದಲೇ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ಚೂಪಾದ ಆಯುಧದಿಂದ ಇರಿದು ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಯತ್ನಿಸಲಾಯಿತಾದರೂ, ಅದಾಗಲೇ ಮುಖಂಡ ಮೃತಪಟ್ಟಿದ್ದಾನೆ ಎಂದು ಎಸ್ ಪಿ ಅಭಿನವ್ ದೇಶ್ ಮುಖ್ ತಿಳಿಸಿದ್ದಾರೆ.


ಇತ್ತೀಚಿನ ಸುದ್ದಿ

Exit mobile version