11:16 AM Wednesday 9 - September 2026

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ್ದ ತಂದೆಗೆ ₹27,000 ದಂಡ: ಶಿವಮೊಗ್ಗ ನ್ಯಾಯಾಲಯ ಆದೇಶ

court
20/08/2026

ಶಿವಮೊಗ್ಗ:  ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ದ್ವಿಚಕ್ರ ವಾಹನ (ಬೈಕ್) ನೀಡಿದ್ದ ತಂದೆಗೆ (ವಾಹನದ ಮಾಲೀಕ) ಭದ್ರಾವತಿಯ ಒಂದನೇ ಎಸಿಜೆ ಮತ್ತು ಜೆಎಂ‌ಎಫ್ ​ಸಿ ನ್ಯಾಯಾಲಯವು 27,000 ರೂಪಾಯಿ ಭಾರಿ ದಂಡ ವಿಧಿಸಿ ಆದೇಶಿಸಿದೆ.

2025ರಲ್ಲಿ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಅಪ್ರಾಪ್ತ ಬಾಲಕನೊಬ್ಬ ಬೈಕ್ ಚಲಾಯಿಸುತ್ತಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮೋಟಾರು ವಾಹನ ಕಾಯ್ದೆಯ (IMV Act) ಕಲಂ 199(ಎ), 180 ಮತ್ತು 196 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಭದ್ರಾವತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದರು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಬಾಲಕನಿಗೆ ವಾಹನ ನೀಡಿದ ತಂದೆಗೆ ₹27,000 ದಂಡ ವಿಧಿಸಿದ್ದು, ಕೋರ್ಟ್ ಆದೇಶದಂತೆ ಪೋಷಕರು ದಂಡದ ಮೊತ್ತವನ್ನು ಪಾವತಿಸಿದ್ದಾರೆ.

ಪ್ರತ್ಯೇಕ ಘಟನೆ

ಇದೇ ವೇಳೆ, 2010ರ ಕಳವು (379 IPC) ಪ್ರಕರಣವೊಂದರಲ್ಲಿ ಭಾಗಿಯಾಗಿ ಕಳೆದ 13 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದಾವಣಗೆರೆ ಮೂಲದ ಮಂಜುನಾಥ್ ಎಂಬ ಆರೋಪಿಯನ್ನು ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version