ಫೇಸ್ ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ವಿಡಿಯೋ  ಫಾರ್ವರ್ಡ್ ಮಾಡುತ್ತಿದ್ದ ಆರೋಪಿಯ ಬಂಧನ - Mahanayaka
10:35 AM Thursday 12 - September 2024

ಫೇಸ್ ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ವಿಡಿಯೋ  ಫಾರ್ವರ್ಡ್ ಮಾಡುತ್ತಿದ್ದ ಆರೋಪಿಯ ಬಂಧನ

04/11/2020

ಶಿವಮೊಗ್ಗ: ಫೇಸ್ ಬುಕ್ ಮೆಸೆಂಜರ್ ಮೂಲಕ ಮಕಳ ಅಶ್ಲೀಲ ಚಿತ್ರ ಫಾರ್ವರ್ಡ್ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಶಿವಮೊಗ್ಗದ ಸಿ.ಇ.ಎನ್. ಪೋಲಿಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳನ್ನು ಆರೋಪಿಯ ಮೇಲೆ ದಾಖಲಿಸಲಾಗಿದೆ.


ನಿದಿಗೆ ದುಮ್ಮಳ್ಳಿಯ ರಘು(25) ಬಂಧಿತ ಆರೋಪಿಯಾಗಿದ್ದಾನೆ. ಬುಧವಾರ ಆರೋಪಿಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ ಮೊಬೈಲ್ ನ್ನು ವಶಕ್ಕೆ ಪಡೆಯಲಾಗಿದೆ.  ಮಕ್ಕಳ ಅಶ್ಲೀಲ ವಿಡಿಯೋ ಅಥವಾ ಚಿತ್ರಗಳನ್ನು ಅಂತರ್ಜಾಲದ ಮೂಲಕ ಹುಡುಕುವುದು, ಶೇಖರಿಸುವುದು ಮತ್ತು ಫಾರ್ವರ್ಡ್ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(B) ಪ್ರಕಾರ ಅಪರಾಧವಾಗಿರುತ್ತದೆ ಎಂದು ಎಸ್ಪಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.


ಆರೋಪಿಯ ವಿರುದ್ಧ ಕಲಂ 67(ಬಿ) ಐಟಿ ಕಾಯ್ದೆಯಂತೆ ಶಿವಮೊಗ್ಗದ ಸಿ.ಇ.ಎನ್. ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ.



Provided by

ಇತ್ತೀಚಿನ ಸುದ್ದಿ