ಶಿವಮೊಗ್ಗ ಡಿಸಿ ಕಚೇರಿ ಸಿಬ್ಬಂದಿ ನಾಪತ್ತೆಗೆ ಹೊಸ ತಿರುವು: ನಾಪತ್ತೆಯಾದ ದಿನ ಹಣ ಡ್ರಾ ಮಾಡಿದ್ದ ಗಿರಿರಾಜ್! - Mahanayaka
7:49 AM Thursday 11 - September 2025

ಶಿವಮೊಗ್ಗ ಡಿಸಿ ಕಚೇರಿ ಸಿಬ್ಬಂದಿ ನಾಪತ್ತೆಗೆ ಹೊಸ ತಿರುವು: ನಾಪತ್ತೆಯಾದ ದಿನ ಹಣ ಡ್ರಾ ಮಾಡಿದ್ದ ಗಿರಿರಾಜ್!

giriraj
30/09/2021

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸಹೋದ್ಯೋಗಿಗೆ ವಾಟ್ಸಾಪ್ ಕಳುಹಿಸಿದ್ದ ಗಿರಿರಾಜ್ ಅದೇ ದಿನ ಬೆಳಗ್ಗೆ ಎಟಿಎಂನಿಂದ ಹಣ ಡ್ರಾ ಮಾಡಿದ್ದಾರೆ ಎಂದು ಹೇಳಲಾಗಿದೆ.


Provided by

ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೋಗಿದ್ದ ಅವರು ಹಣ ಯಾಕೆ ಡ್ರಾ ಮಾಡಿದ್ದಾರೆ ಎನ್ನುವ ಅನುಮಾನಗಳು ಇದೀಗ ಮೂಡಿದ್ದು, ಪೊಲೀಸರ ತನಿಖೆಯ ದಿಕ್ಕನ್ನು ಕೂಡ ಬದಲಿಸುವಂತಾಗಿದೆ.  ಮಂಗಳವಾರ ಬೆಳಗ್ಗೆ 6 ಗಂಟೆಗೆ ಗಿರಿರಾಜ್ ತಮ್ಮ ಮನೆಯಿಂದ ತೆರಳಿದ್ದರು. ಈ ವೇಳೆ ಕಚೇರಿ ಸಿಬ್ಬಂದಿಗೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಾಟ್ಸಪ್ ಮೆಸೇಜ್ ಮಾಡಿದ್ದರು. ಇದು ಜಿಲ್ಲಾಧಿಕಾರಿ ಕಚೇರಿಯಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

ಗಿರಿರಾಜ್ ನಾಪತ್ತೆಯಾಗುವ ಮೊದಲು ತಮ್ಮ ಸಾವಿಗೆ ಹಿರಿಯ ಅಧಿಕಾರಿಗಳು ಕಾರಣ ಎಂದು ವಾಟ್ಸಪ್ ಸಂದೇಶದಲ್ಲಿ ತಿಳಿಸಿದ್ದರು. ಕಚೇರಿಯ ಕೆಲಸಗಳ ಕೆಲವು ವಿಚಾರಗಳ ಪ್ರಸ್ತಾಪಿಸಿ ಇದರಿಂದ ಮನನೊಂದು ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಗಿರಿರಾಜ್ ಸಂದೇಶದಲ್ಲಿ ಹೇಳಿದ್ದರು.

ಇನ್ನೂ ಪತಿ ನಾಪತ್ತೆಯಾಗಿರುವ ಬಗ್ಗೆ ಗಿರಿರಾಜ್ ಪತ್ನಿ ನೀಡಿರುವ ದೂರಿನಲ್ಲಿ  ತಮ್ಮ ಪತಿ ಗಿರಿರಾಜ್ ಬಸವನಗುಡಿಯ ಮನೆಯಿಂದ ಹೋದವರು ಮರಳಿ ಬಂದಿಲ್ಲ. ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಹುಡಕಿಕೊಡುವಂತೆ ಗಿರಿರಾಜ್ ಪತ್ನಿ ದೂರಿನಲ್ಲಿ ಮನವಿ ಮಾಡಿದ್ದಾರೆ. ದೂರಿನಲ್ಲಿ ಹಿರಿಯ ಅಧಿಕಾರಿಗಳ ಒತ್ತಡ ಬಗ್ಗೆಯಾಗಲಿ, ವಾಟ್ಸಪ್ ಮೆಸೇಜಿನಲ್ಲಿ ಗಿರಿರಾಜ್ ಪ್ರಸ್ತಾಪಿಸಿದ ವಿಚಾರವಾಗಲಿ ಉಲ್ಲೇಖಿಸಿಲ್ಲ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ “ನೈಟ್ ಪೊಲಿಟಿಕ್ಸ್” ಚೆನ್ನಾಗಿ ಗೊತ್ತು | ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ

ಕಣ್ಣ ಮುಂದೆಯೇ ಬಾಲಕನಿಗೆ ವಿದ್ಯುತ್ ಶಾಕ್ ಹೊಡೆದರೂ ರಕ್ಷಿಸಲು ಸಾಧ್ಯವಾಗಲಿಲ್ಲ

ದಿ ನ್ಯೂಯಾರ್ಕ್ ಟೈಮ್ಸ್ ನಲ್ಲಿ ಮೋದೀಜಿಯ ಪ್ರವಾಸದ ಬಗ್ಗೆ ಯಾವುದೇ ವರದಿ ಪ್ರಕಟವಾಗಿಲ್ಲ, ವೈರಲ್ ಫೋಟೋ: ಫೇಕ್ ಪತ್ರಿಕೆ ಸ್ಪಷ್ಟನೆ

ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದರೆ, ಮಹಿಳೆಯರ ಸಾಲ ಮನ್ನಾ | ಅನಿತಾ ಕುಮಾರಸ್ವಾಮಿ

ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಜೀವಂತವಾಗಿ ಪತ್ತೆ!

ನಿಮಗಿದು  ಗೊತ್ತೇ? ಬೆಳ್ಳುಳ್ಳಿಯ ಬಳಕೆಯಿಂದ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳಿವೆ ?

ಬಿಜೆಪಿಯ ಜನದರ್ಶನ ಯಾತ್ರೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಾ ವೇದಿಕೆಯಿಂದ ಕೆಳಗೆ ಬಿದ್ದ ಬಿಜೆಪಿ ನಾಯಕ | ವಿಡಿಯೋ ವೈರಲ್

ಇತ್ತೀಚಿನ ಸುದ್ದಿ