ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಾವಿಗೆ ಶರಣು - Mahanayaka

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಾವಿಗೆ ಶರಣು

shivamogga
13/08/2024

ಶಿವಮೊಗ್ಗ:  ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ.

ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28) ಭುವನೇಶ್ವರಿ ಮಗ ದರ್ಶನ್ (22) ಸಾವಿಗೆ ಶರಣಾದವರು ಎಂದು ಗುರುತಿಸಲಾಗಿದೆ.

ಭುವನೇಶ್ವರಿ ಹೋಟೆಲ್‌ ವೊಂದರಲ್ಲಿ ಕೆಲಸ ಮಾಡುತ್ತಿದ್ದರು.  ಅವರ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಎಲ್ಲರೂ ಮನೆಗೆ ಬಂದಿದ್ದರು. ಆದ್ರೆ ರಾತ್ರಿ ವೇಳೆ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.

ಕುಟುಂಬಸ್ಥರು  ಇವರಿಗೆ ಕರೆ ಮಾಡಿದಾಗ ಯಾರು ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ ಇಂದು ಬೆಳಗ್ಗೆ ಭುವನೇಶ್ವರಿ ಅವರ ಇನ್ನೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರು ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸಾವಿಗೆ ಶರಣಾಗಿರುವುದರ ಹಿಂದಿನ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ