ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ - Mahanayaka
8:32 AM Wednesday 15 - October 2025

ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

bk hariprasad
21/02/2022

ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆಯನ್ನು ಸಚಿವ ಕೆ.ಎಸ್.ಈಶ್ವರಪ್ಪನವರೇ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.


Provided by

ಪರಿಷತ್‌ನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಕೊಲೆ ಪ್ರಕರಣ ಸಂಬಂಧ ಮಾತನಾಡುತ್ತಾ ಪರೋಕ್ಷವಾಗಿ ಈಶ್ವರಪ್ಪನವರೇ ಈ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ತಮ್ಮ ಸ್ಥಾನ ಉಳಿಸಿಕೊಳ್ಳಲು ಈಶ್ವರಪ್ಪ ಕೊಲೆ ಮಾಡಿಸಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ಅಥವಾ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಿನ್ನೆ ಶಿವಮೊಗ್ಗದಲ್ಲಿ ಒಂದು ಘಟನೆ ಆಗಿದೆ. ಕೊಲೆ ಆದ ಯುವಕನ ತಾಯಿ, ತನ್ನ ಮಗ ಎರಡು ವರ್ಷಗಳಿಂದ ಭಜರಂಗದಳದಲ್ಲಿ ಇಲ್ಲ ಅಂತ ಹೇಳಿದ್ದಾರೆ. ಇತ್ತ ಈಶ್ವರಪ್ಪ ಇದು ಮುಸ್ಲಿಂ ಗೂಂಡಾಗಳಿಂದ ಕೊಲೆ ಆಗಿದೆ ಅಂತಾರೆ. ಗೃಹ ಸಚಿವರು ಇದ್ದಾಗ ಇವರು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಈ ಕೊಲೆಯನ್ನು ಈಶ್ವರಪ್ಪನವರೇ ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈಶ್ವರಪ್ಪ ಪರೋಕ್ಷವಾಗಿ ಈ ಕೊಲೆ ಮಾಡಿಸಿದ್ದಾರೆ. ಪೊಲೀಸರ ತನಿಖೆ ಮುನ್ನ ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ ಎಂದು ಹೇಳುತ್ತಾ ಪೆರೆಸ್ ಮೆಸ್ತಾ ವಿಷಯವನ್ನು ಹರಿಪ್ರಸಾದ್ ಪ್ರಸ್ತಾಪ ಮಾಡಿದರು. ಈ ವೇಳೆ ಸದನದಲ್ಲಿ ಮಾತಿನ ಚಕಮಕಿ ನಡೆದಿದ್ದು, ಹರಿಪ್ರಸಾದ್ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆಂಧ್ರ ಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಸಾವು

ಯುವತಿಯ ಖಾಸಗಿ ಫೋಟೋ ಆಕೆಯ ತಂದೆಗೆ ಕಳುಹಿಸಿ ಬೆದರಿಕೆ: ರೌಡಿಶೀಟರ್ ಬಂಧನ

ಭಜರಂಗದಳದ ಕಾರ್ಯಕರ್ತನ ಬರ್ಬರ ಕೊಲೆ; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ; ಶಾಲಾ-ಕಾಲೇಜುಗಳಿಗೆ ರಜೆ

ಬಹಿರಂಗ ಸಮಾವೇಶದಲ್ಲಿಯೇ ಬಿಜೆಪಿ ಮುಖಂಡನ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ನರೇಂದ್ರ ಮೋದಿ

ಇತ್ತೀಚಿನ ಸುದ್ದಿ