ಹಾವೇರಿ ಅಪಘಾತ: ಕುಟುಂಬಸ್ಥರನ್ನು ಭೇಟಿಯಾಗಿ ನೆರವು ನೀಡಿದ ಶಿವರಾಜ್ ಕುಮಾರ್, ಗೀತಾ ದಂಪತಿ

ಶಿವಮೊಗ್ಗ: ಇತ್ತೀಚೆಗೆ ಹಾವೇರಿ ಬಳಿಯಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಶಿವಮೊಗ್ಗದ ಎಮ್ಮಿಹಟ್ಟಿ ಗ್ರಾಮದ 13 ಜನರು ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರನ್ನು ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿ ಮಾಡಿ ಸ್ವಾಂತನ ಹೇಳಿದ್ದಾರೆ.
ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಶಿವಕುಮಾರ್ ದಂಪತಿ, ಹಣ ಸಹಾಯ ಕೂಡ ಮಾಡಿ, ಧೈರ್ಯ ತುಂಬಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಇತ್ತೀಚೆಗೆ 13 ಮಂದಿ ಹಾವೇರಿ ಬಳಿ ಮೃತಪಟ್ಟಿದ್ದರು. ಮೃತರ ಕುಟುಂಬಸ್ಥರು ನೋವಿನಲ್ಲಿ ಸಂಕಷ್ಟದಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ನೆರವಾಗಿದ್ದಾರೆ.
ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಅವರು ಆಗಮಿಸುವ ಹಿನ್ನೆಲೆ ಎಮ್ಮಿಹಟ್ಟಿ ಗ್ರಾಮದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ನೆರೆದಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97