8:52 AM Monday 15 - September 2025

ಹಿರಿಯ ನಟಿ ಲೀಲಾವತಿ ಅವರ‌ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್

bengaluru
28/11/2023

ಬೆಂಗಳೂರು: ವಯೋಸಹಜ ಅನಾರೋಗ್ಯದ ಕಾರಣದಿಂದಾಗಿ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ಅವರ‌ ಆರೋಗ್ಯ ಕ್ಷೇಮವನ್ನು ಪತ್ನಿ ಗೀತಾ ಸಹಿತ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್ ವಿಚಾರಿಸಿದರು.

ಇಂದು ಪತ್ನಿ‌ಸಹಿತ ಲೀಲಾವತಿ ಅವರ ಮನೆಗೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ಅವರನ್ನು ಲೀಲಾವತಿ ಪುತ್ರ ನಟ ವಿನೋದ್‌ರಾಜ್ ಆತ್ಮೀಯವಾಗಿ ಬರಮಾಡಿಕೊಂಡು ಆಲಂಗಿಸಿದರು. ಇದು ಭಾವುಕ‌ ಕ್ಷಣಕ್ಕೆ ಕಾರಣವಾಯಿತು. ಈ ವೇಳೆ ಶಿವಣ್ಣ, ಹಿರಿಯ ನಟಿಯ ಆರೋಗ್ಯದ ಕುರಿತು ವಿವರಣೆ ಪಡೆದುಕೊಂಡರು. ಲೀಲಾವತಿ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದರು.

ವಯಸ್ಸಿನ ಕಾರಣದಿಂದಾಗಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಗೆ ತೆರೆಳ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದೀಗ ಅರ್ಜುನ್ ಸರ್ಜಾ ಕೂಡ ಅದೇ ಕೆಲಸ ಮಾಡಿದ್ದಾರೆ.

87 ವರ್ಷದ ಹಿರಿಯ ನಟಿ ಲೀಲಾವತಿಯವರು ಆರೋಗ್ಯ ಸಮಸ್ಯೆಯೆದುರಿಸುತ್ತಿದ್ದು,ಬೆಡ್ ರೆಸ್ಟ್‌ನಲ್ಲಿದ್ದಾರೆ. ಮೊನ್ನೆಯಷ್ಟೇ ಲೀಲಾವತಿ ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದರು ಖ್ಯಾತ ನಟ ಅರ್ಜುನ್ ಸರ್ಜಾ ದರ್ಶನ್. ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲವು ಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದರು. ಹೀಗೆ ನಟನಟಿಯರಾದಿಯಾಗಿ ಬಹುತೇಕ ಕಲಾವಿದರು ಬಂದು ನೋಡಿಕೊಂಡು ಹೋಗುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version