ಶೋಭಾ ಕರಂದ್ಲಾಜೆ–ಸಿ.ಟಿ.ರವಿ ಹಿಂದಿ ಕೇಳಿ, ಹಿಂದಿ ಭಾಷೆ ಬ್ಯಾನ್ ಮಾಡಿತಾ ಸರ್ಕಾರ?

hindi
04/04/2026

ಬೆಂಗಳೂರು: ರಾಜ್ಯ ಸರ್ಕಾರ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್‌ ವ್ಯವಸ್ಥೆ ಜಾರಿ ಮಾಡಲಾಗಿದೆ. ಅಂಕದ ಬದಲು ಗ್ರೇಡ್‌ ನೀಡಲಾಗುತ್ತದೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಚರ್ಚೆಗಳನ್ನ ಹುಟ್ಟು ಹಾಕಿದೆ.  ಕೆಲವರು ಇದನ್ನು ಗಂಭೀರ ವಿಷಯವಾಗಿ ಚರ್ಚಿಸಿದ್ರೆ, ಇನ್ನು ಕೆಲವರು ಇದನ್ನು ಹಾಸ್ಯವಾಗಿ ಚರ್ಚೆ ಮಾಡ್ತಾ ಇದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದಿಯನ್ನು ಪರೋಕ್ಷವಾಗಿ ಬ್ಯಾನ್ ಮಾಡಲಾಗುತ್ತಿದೆ ಎನ್ನುವ ಆರೋಪಗಳನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ.

ಈ ನಡುವೆ ಸಾರ್ವಜನಿಕರು ಬಿಜೆಪಿ ನಾಯಕರ ಹಿಂದಿ ಭಾಷಾ ಜ್ಞಾನವನ್ನು ಪ್ರಶ್ನೆ ಮಾಡುತ್ತಿದ್ದಾರೆ. ಜೊತೆಗೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಮತ್ತು ಬಿಜೆಪಿ ನಾಯಕ ಸಿ.ಟಿ.ರವಿ ಅವರು ಹಿಂದಿ ಮಾತನಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಒಂದು ಹಂತದಲ್ಲಿ ಸಿ.ಟಿ.ರವಿ ಮತ್ತು ಶೋಭಾ ಕರಂದ್ಲಾಜೆ ಅವರ ಹಿಂದಿ ಮಾತುಗಳನ್ನು ಕೇಳಿ, ರಾಜ್ಯ ಸರ್ಕಾರ ಹಿಂದಿ ಬ್ಯಾನ್ ಮಾಡಿತೇ? ಅಂತ ವ್ಯಂಗ್ಯ ಭರಿತ ಪ್ರಶ್ನೆಗಳು ಕೇಳಿ ಬಂದಿವೆ.

ಅರ್ಧಂಬರ್ಧ ಹಿಂದಿ ಭಾಷೆಯಲ್ಲಿ ಶೋಭಾ ಕರಂದ್ಲಾಜೆ ಹಾಗೂ ಸಿ.ಟಿ.ರವಿ ಕಷ್ಟಪಟ್ಟು ಮಾತನಾಡುತ್ತಿರುವ ವಿಡಿಯೋಗಳು ಪ್ರತಿಬಾರಿಯೂ ಹಿಂದಿ ಹೇರಿಕೆಯ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅದೇ ರೀತಿಯಲ್ಲಿ ಈ ಬಾರಿ ಕೂಡ ವೈರಲ್ ಆಗುತ್ತಿದೆ.

ಒಟ್ಟಿನಲ್ಲಿ ಹಿಂದಿ ಭಾಷೆಯನ್ನು ರಾಜ್ಯದಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ ಅಂತ ರಾಜ್ಯ ಸರ್ಕಾರ ಹಾಗೂ ವಿಪಕ್ಷ ಬಿಜೆಪಿ ನಡುವಿನ ವಾಕ್ಸಮರ ತಾರಕಕ್ಕೇರಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version