ಪಕ್ಷ ಬಿಟ್ಟು ಹೋದವರನ್ನು ಮತ್ತೆ ಆಹ್ವಾನಿಸಿದ ಶೋಭಾ ಕರಂದ್ಲಾಜೆ

Shobha Karandlaje
19/08/2023

ಚಿಕ್ಕಮಗಳೂರು: ಬಿಜೆಪಿ ಪಕ್ಷ ಬಿಟ್ಟವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಪಕ್ಷವನ್ನು ಬಲಿಷ್ಠಗೊಳಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ದೇಶಕ್ಕೆ ಮೋದಿ ಬೇಕಾಗಿದೆ, ವಿಶ್ವಕ್ಕೆ ಮೋದಿ ಬೇಕಾಗಿದೆ, ವಿಶ್ವದ ಹಲವು ದೇಶ ಭಾರತ, ಮೋದಿಯನ್ನ ನೋಡ್ತಿವೆ, ಭಾರತವನ್ನು ಮತ್ತಷ್ಟು ಗಟ್ಟಿ ಮಾಡಲು ಎಲ್ಲರ ಸಹಕಾರ ಬೇಕು ಎಂದು ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಮನವಿ ಮಾಡಿಕೊಂಡರು.

ಬಿಜೆಪಿ ಸರ್ಕಾರ ರಚನೆ ಮಾಡಲು ಶಾಸಕರು, ಮುಖಂಡರು ಬಿಜೆಪಿ ಸೇರಿದ್ದಾರೆ. ಅವರಿಗೆ ಬಿಜೆಪಿ ಅತ್ಯಂತ ಗೌರವದಿಂದ ನಡೆದುಕೊಂಡಿದೆ, ನಮ್ಮ ಸರ್ಕಾರದ ಅವಧಿಯಲ್ಲಿ ಅವರಿಗೆ ದೊಡ್ಡ ಖಾತೆ ಕೊಟ್ಟಿತ್ತು, ಅವರನ್ನ ದೊಡ್ಡ-ದೊಡ್ಡ ಜಿಲ್ಲೆಗೆ ಉಸ್ತುವಾರಿ ಸಚಿವರನ್ನ ಮಾಡಿದೆ, ಪಕ್ಷದ ಎಲ್ಲಾ ಚಟುವಟಿಕೆಯಲ್ಲಿ ಅವರನ್ನ ತೊಡಗಿಸಿಕೊಳ್ಳಲಾಗಿತ್ತು. ಇವತ್ತು ಸರ್ಕಾರ ಇಲ್ಲ, ಬಿಜೆಪಿ ಸೋತಿದೆ, ಆ ಸೋಲಿನಲ್ಲಿ ಎಲ್ಲರ ಪಾಲು ಇದೆ, ಮತ್ತೆ ಬಿಜೆಪಿಯನ್ನ ಕಟ್ಟಬೇಕು ಅನ್ನೋದು ನಮ್ಮ ಅಪೇಕ್ಷೆ ಎಂದು ಅವರು ತಿಳಿಸಿದರು.

ಅಧಿಕಾರಕ್ಕಾಗಿ ಬಂದ್ರು, ಅಧಿಕಾರ ಇಲ್ಲದಾಗ ಹೋದ್ರು ಎಂಬ ಕೆಟ್ಟ ಹೆಸರನ್ನ ಯಾರೂ ತೆಗೆದುಕೊಳ್ಳಲ್ಲ ಅನ್ನೋ ವಿಶ್ವಾಸವಿದೆ, ಅಧಿಕಾರ ಇದ್ದಾಗ ಎಲ್ಲಾ ಅನುಭವಿಸಿದ್ದೇವೆ, ಈಗ ಬಿಜೆಪಿಯನ್ನ ಗಟ್ಟಿ ಮಾಡಬೇಕಿದೆ ಎಂದು ಅವರು ಕರೆ ನೀಡಿದರು.

 

ಇತ್ತೀಚಿನ ಸುದ್ದಿ

Exit mobile version