ಮತ ಚಲಾಯಿಸಿದ ಶೋಭಾ ಕರಂದ್ಲಾಜೆ: ಮತಗಟ್ಟೆಗೆ ಬಂದು ಮತ ಚಲಾಯಿಸಿದ ನವವಧು
ಉಡುಪಿ ಜಿಲ್ಲೆಯಲ್ಲಿ ಶೇ.13.28 ಮತದಾನ
ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 9ಗಂಟೆ ಸುಮಾರಿಗೆ ಒಟ್ಟು ಶೇ.13.28ರಷ್ಟು ಮತದಾನ ಆಗಿರುವ ಬಗ್ಗೆ ವರದಿಯಾಗಿದೆ.
ಬೈಂದೂರು ಶೇ.10.81, ಕುಂದಾಪುರ ಶೇ.14.17, ಉಡುಪಿ ಶೇ.13.45, ಕಾಪು ಶೇ.13.82, ಕಾರ್ಕಳ ಶೇ.14.61 ಮತದಾನವಾಗಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿದೆ
ಬೆಂಗಳೂರಿನಲ್ಲಿ ಮತ ಚಲಾಯಿಸಿದ ಶೋಭಾ ಕರಂದ್ಲಾಜೆ
ಉಡುಪಿ: ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಬೆಂಗಳೂರಿನ, ಡಾಲರ್ಸ್ ಕಾಲನಿಯ ಸರ್ಕಾರಿ ಗೋಪಾಲ್ ರಾಮ್ ನಾರಾಯಣ್ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.
ಮತಗಟ್ಟೆಗೆ ಬಂದು ಮತ ಚಲಾಯಿಸಿದ ನವವಧು!
ಮದುವೆಗೆ ಮುನ್ನ ನವವಧು ಕಾಪು ವಿಧಾನಸಭಾ ಕ್ಷೇತ್ರದ ಪಲಿಮಾರು ಗ್ರಾಪಂ ವ್ಯಾಪ್ತಿಯ ಅವರಾಲು ಮಟ್ಟು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಮನೆಯಲ್ಲಿ ಶೃಂಗಾರಗೊಂಡು ನೇರವಾಗಿ ಮತಗಟ್ಟೆಗೆ ಆಗಮಿಸಿದ ಮದುಮಗಳು ಮೆಲಿಟಾ ಸೋರಸ್ ಮತದಾನ ಮಾಡಿದ್ದಾರೆ. ಬಳಿಕ ಅವರು ಚರ್ಚ್ಗೆ ತೆರಳಿ ಮದುವೆಯಾಗಿ ಭಾಗಿಯಾದರು ಎಂದು ತಿಳಿದುಬಂದಿದೆ.
ಕರ್ನಾಟಕ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲೆಯಲ್ಲಿ 11 ಗಂಟೆಯವರೆಗೆ, ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 27.06%, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 32.14%, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 29.44 %, ಕಾಪು ವಿಧಾನಸಭಾ ಕ್ಷೇತ್ರದಲ್ಲಿ 28.5%, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 32.7% ಮತದಾನವಾಗಿರುತ್ತದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























