ಬಿಜೆಪಿ—ಜೆಡಿಎಸ್ ಗೆ ಶಾಕ್: ಸಿ.ಪಿ.ಯೋಗೇಶ್ವರ್ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷ! - Mahanayaka
11:24 PM Tuesday 9 - December 2025

ಬಿಜೆಪಿ—ಜೆಡಿಎಸ್ ಗೆ ಶಾಕ್: ಸಿ.ಪಿ.ಯೋಗೇಶ್ವರ್ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷ!

d k shivakumar vs c p yogeshwar
23/10/2024

ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನ ಹೊಂದಿರುವ  ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ.

ಡಿಎ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಈ ಮೂಲಕ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ನಾಟಕ ಪ್ರಹಸನಕ್ಕೆ ಬಹುತೇಕ ತೆರೆಬಿದ್ದಂತಾಗಿದೆ.

ಸಿ.ಪಿ.ಯೋಗೇಶ್ವರ್ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಕೆಲ ಕಾಲ ಚರ್ಚೆ ಬಳಿಕ ಡಿ.ಕೆ.ಶಿವಕುಮಾರ್ ಹಾಗೂ ಯೋಗೇಶ್ವರ್ ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಬಿಜೆಪಿ–ಜೆಡಿಎಸ್ ನಾಯಕರಿಗೆ ಟಕ್ಕರ್ ಕೊಡಲು ಸಜ್ಜಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ