ಪಿಎಫ್ ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತ: ಕೆ.ಎಸ್.ಈಶ್ವರಪ್ಪ

eshwarappa
15/04/2023

ಬಳ್ಳಾರಿ: ನನ್ನ ಹತ್ಯೆಗೆ ಲಷ್ಕರ್–ಇ–ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಪಿಎಫ್ ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತವಾಯಿತು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಯಿಂದ ಈ ಬಗ್ಗೆ ವಿಚಾರ ತಿಳಿಯಿತು. “ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ನನಗೆ ಕರೆ ಮಾಡಿ ರಕ್ಷಣೆ ನೀಡುವ ಭರವಸೆ ನೀಡಿದ್ದಾರೆ. ಬೆದರಿಕೆ ಹಾಕಿದ್ದ ಎನ್ನಲಾದ ಶಾಹಿರ್ ಶೇಕ್ ಎಂಬಾತನನ್ನು ನಾಗ್ಪುರ ಪೊಲೀಸರು ಬಂಧಿಸಿದ್ದು, ಪ್ರಸ್ತುತ ಆತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆಂದು ಹೇಳಿದರು.

”ನಾನು ನನ್ನ ಅಜೆಂಡಾದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ನಾನು ನನ್ನ ಕೊನೆಯ ಉಸಿರು ಇರುವವರೆಗೂ ಹಿಂದುತ್ವವನ್ನು ಅನುಸರಿಸುತ್ತೇನೆ ಮತ್ತು ರಕ್ಷಿಸುತ್ತೇನೆ, ಅಲ್ಲಿಯವರೆಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ, ಬೆದರಿಕೆ ಯಾವಾಗಲೂ ಇದ್ದೇ ಇರುತ್ತದೆ. ನನ್ನ ರಾಜಕೀಯ ಜೀವನದಲ್ಲಿ ನಾನು ಇಂತಹ ಶಕ್ತಿಗಳಿಗೆ ಎಂದಿಗೂ ಹೆದರುವುದಿಲ್ಲ ಎಂದು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version