ಬಸ್ಸಿನಲ್ಲಿ ಯುವತಿಯ ಕೈಕಟ್ಟಿ ಹಾಕಿ ಹಲ್ಲೆ ನಡೆಸಿದ ಯುವಕ: ರಾಜ್ಯದಲ್ಲೊಂದು ಹೀನ ಘಟನೆ!

chikkamagaluru
25/01/2026

ಚಿಕ್ಕಮಗಳೂರು: ಕಾಫಿನಾಡಿನ ಬಸ್ ನಿಲ್ದಾಣದಲ್ಲಿ ಕಳೆದ ರಾತ್ರಿ ಸರ್ಕಾರಿ ಬಸ್ಸೊಂದರಲ್ಲಿ ಯುವತಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ:

ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದ ಸರ್ಕಾರಿ ಬಸ್ಸಿನಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಚಿಕ್ಕಮಗಳೂರು ನಿಲ್ದಾಣಕ್ಕೆ ತಲುಪಿದ ವೇಳೆ, ಅಪರಿಚಿತ ಯುವಕನೊಬ್ಬ ಯುವತಿಯ ಕೈಗಳನ್ನು ಕಟ್ಟಿ ಹಾಕಿ ಆಕೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ವಿಡಿಯೋ ವೈರಲ್:

ಯುವತಿಯ ಮೇಲೆ ಯುವಕ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಸಾರಿಗೆಯಲ್ಲೇ ಯುವತಿಯ ಮೇಲೆ ಇಂತಹ ದೌರ್ಜನ್ಯ ನಡೆದಿರುವುದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.

ಘಟನೆ ನಡೆದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಲ್ಲೆಗೊಳಗಾದ ಯುವತಿ ಮತ್ತು ಹಲ್ಲೆ ನಡೆಸಿದ ಆ ಯುವಕ ಯಾರೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಪೊಲೀಸರು ವೈರಲ್ ವಿಡಿಯೋ ಆಧರಿಸಿ ಅವರಿಬ್ಬರ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಈ ಅಮಾನುಷ ಕೃತ್ಯವು ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version