11:00 PM Thursday 21 - August 2025

ಶಾಕಿಂಗ್‌ ನ್ಯೂಸ್:‌ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

mudigere
20/12/2023

ಚಿಕ್ಕಮಗಳೂರು:  7ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆಯೊಂದು ಚಿಕ್ಕಮಗಳುರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.

ಸೃಷ್ಟಿ (13) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಎಂದಿನಂತೆ ಬೆಳಗ್ಗೆ ಶಾಲೆಗೆ ತೆರಳುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಮೂಡಿಗೆರೆ ಎಂ.ಜಿ.ಎಂ. ಸರ್ಕಾರಿ ಆಸ್ಪತ್ರೆ ವೈದ್ಯರು ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ಎಂದು ದೃಢಪಡಿಸಿದ್ದಾರೆ.

ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸೃಷ್ಟಿಯ ಅಕಾಲಿಕ ಮರಣದಿಂದಾಗಿ ನಾಗರಿಕರು ಆಘಾತಗೊಂಡಿದ್ದಾರೆ. ಮಗಳ ಸಾವನ್ನು ಸ್ವೀಕರಿಸಲು ಸಾಧ್ಯವಾಗದೇ ಕುಟುಂಬ ಕಂಗೆಟ್ಟು ನಿಂತಿದೆ.

ಇತ್ತೀಚೆಗೆ ಸಣ್ಣ ವಯಸ್ಸಿನ ಮಕ್ಕಳು ಹೃದಯಾಘಾತದಿಂದ ಮೃತಪಡುತ್ತಿರುವುದು ವೈದ್ಯ ಲೋಕಕ್ಕೆ ಸವಾಲಿನ ವಿಚಾರವಾಗಿ ಪರಿಣಮಿಸಿದೆ.

ಇತ್ತೀಚಿನ ಸುದ್ದಿ

Exit mobile version