ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಅಂಗಡಿ: ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮ - Mahanayaka
5:29 PM Wednesday 5 - November 2025

ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಅಂಗಡಿ: ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮ

sullia
20/01/2024

ಸುಳ್ಯ: ಅಂಗಡಿಯೊಂದು ಹೊತ್ತಿ ಉರಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ನಡೆದಿದೆ.

ಗೋಡಾನ್ ನಲ್ಲಿ ಹೊಗೆ ಬರುತ್ತಿದ್ದರಿಂದ ಅನುಮಾನಗೊಂಡು ಅಂಗಡಿ ಮಾಲಿಕರು ಪರಿಶೀಲಿಸಿದಾಗ  ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಅವರು ಸಮೀಪದ ಅಂಗಡಿಗಳಿಗೆ ಮಾಹಿತಿ ನೀಡಿದ್ದು,  ಹೀಗಾಗಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

ಸ್ಥಳೀಯ ಅಂಗಡಿ ಮಾಲಿಕರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ತೆರಳಿ ನೀರು ನಂದಿಸುವ ಪ್ರಯತ್ನ ಮಾಡಿದರು. ಆದರೂ ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ಬೆಲೆಬಾಳುವ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ