ಬುಡಕಟ್ಟು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಅಂಗಡಿಗಳು, ಮನೆಗಳಿಗೆ ಬೆಂಕಿ

ತೆಲಂಗಾಣದ ಆಸಿಫಾಬಾದ್ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯ ಮೇಲಿನ ಅತ್ಯಾಚಾರ ಯತ್ನ ಘಟನೆಯನ್ನು ಖಂಡಿಸಿ ಗುಂಪೊಂದು ಪ್ರತಿಭಟನೆ ನಡೆಸಿದ ನಂತರ ಉದ್ವಿಗ್ನತೆ ಭುಗಿಲೆದ್ದಿದೆ. ಗುಂಪು ಅಂಗಡಿಗಳು ಮತ್ತು ಮನೆಗಳನ್ನು ಸುಟ್ಟುಹಾಕುತ್ತಿದ್ದಂತೆ ಜೈನೂರ್ ಪಟ್ಟಣದ ದೃಶ್ಯಗಳು ಆಕಾಶದಲ್ಲಿ ಬೂದು ಹೊಗೆ ತುಂಬಿರುವುದನ್ನು ತೋರಿಸಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಈ ಪ್ರದೇಶದಲ್ಲಿ ಭಾರೀ ಪೊಲೀಸ್ ನಿಯೋಜಿಸಲಾಗಿದೆ.
45 ವರ್ಷದ ಬುಡಕಟ್ಟು ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಆಟೋ ಚಾಲಕನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆಗಸ್ಟ್ 31 ರಂದು ಈ ಘಟನೆ ನಡೆದಿದ್ದು, ಮಹಿಳೆ ರಸ್ತೆಯ ಬದಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.
ಆರಂಭದಲ್ಲಿ ಈ ಘಟನೆಯನ್ನು ಹಿಟ್ ಅಂಡ್ ರನ್ ಪ್ರಕರಣ ಎಂದು ವರದಿ ಮಾಡಲಾಗಿತ್ತು. ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ನ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಸೆಪ್ಟೆಂಬರ್ 1 ರಂದು, ಮಹಿಳೆಯ ಕಿರಿಯ ಸಹೋದರ ದೂರು ದಾಖಲಿಸಿದ್ದರು. ಹೀಗಾಗಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದರು.
ಗೊಂಡ್ ಸಮುದಾಯಕ್ಕೆ ಸೇರಿದ ಮಹಿಳೆಗೆ ಸೆಪ್ಟೆಂಬರ್ 2 ರಂದು ಪ್ರಜ್ಞೆ ಮರಳಿತ್ತು. ಇದೇ ವೇಳೆ ಪೊಲೀಸರಿಗೆ ತಾನು ಅನುಭವಿಸಿದ ಕರಾಳತೆಯನ್ನು ಬಿಚ್ಚಿಟ್ಟರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth