ಸಲ್ಮಾನ್ ಖಾನ್ ಮುಂಬೈ ನಿವಾಸದ ಹೊರಗೆ ಗುಂಡಿನ ದಾಳಿ: ಬಾಲಿವುಡ್ ನಟನನ್ನು ಕೊಲ್ಲಲು ಯತ್ನ..?

ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಭಾನುವಾರ ಮುಂಜಾನೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯಾರೂ ಸಾವನ್ನಪ್ಪಿಲ್ಲ ಅಥವಾ ಗಾಯಗೊಂಡಿಲ್ಲ. ಮುಂಜಾನೆ 4:51 ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ವ್ಯಕ್ತಿಗಳು ಗ್ಯಾಲಕ್ಸಿ ಅಪಾರ್ಟ್ ಮೆಂಟ್ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ನಂತರ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಬೈಕ್ ನಲ್ಲಿ ಬಂದ ವ್ಯಕ್ತಿಗಳು ಸಲ್ಮಾನ್ ಖಾನ್ ಅವರ ಮನೆಯ ಕಡೆಗೆ ವೇಗವಾಗಿ ಹೋಗುತ್ತಿರುವುದನ್ನು ತೋರಿಸಿದೆ.
ಅಪರಾಧ ವಿಭಾಗ, ಸ್ಥಳೀಯ ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ತನಿಖೆಗಾಗಿ ಸ್ಥಳಕ್ಕೆ ಭೇಟಿ ನೀಡಿವೆ. ವಿಧಿವಿಜ್ಞಾನ ತಂಡವು ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಹಾರಿಸಿದ ಗುಂಡುಗಳ ಕವಚವನ್ನು ವಶಪಡಿಸಿಕೊಂಡಿದೆ.
ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ವಾಂಟೆಡ್ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಹಲವಾರು ಬಾರಿ ಘೋಷಿಸಿದ ನಂತರ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ತಮ್ಮ ಶೂಟರ್ ಗಳನ್ನು ನಟನನ್ನು ಕೊಲ್ಲಲು ಮುಂಬೈಗೆ ಕಳುಹಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth