ಮಹಾರಾಷ್ಟ್ರದಲ್ಲೂ ಹಿಂದಿ ಹೇರಿಕೆ ವಿರುದ್ಧ ಕೂಗು! - Mahanayaka
10:51 AM Wednesday 22 - October 2025

ಮಹಾರಾಷ್ಟ್ರದಲ್ಲೂ ಹಿಂದಿ ಹೇರಿಕೆ ವಿರುದ್ಧ ಕೂಗು!

shiv sena
20/04/2025

ಮುಂಬೈ: ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ಹಿಂದಿ ಹೇರಿಕೆ ವಿರುದ್ಧ ಕೂಗು ಕೇಳಿ ಬಂದಿದೆ. ಇದೀಗ ಮಹಾರಾಷ್ಟ್ರದಲ್ಲೂ ಹಿಂದಿ ಹೇರಿಕೆ ವಿರೋಧಿ ಕೂಗು ಕೇಳಿ ಬಂದಿದೆ.

ಐಎನ್‌ ಡಿಐಎ ಮೈತ್ರಿ ಬಣದ ಕಾಂಗ್ರೆಸ್‌, ಶಿವಸೇನೆ (ಉದ್ಧವ್‌ ಬಣ) ಕೇಂದ್ರ ಸರಕಾರದ ವಿರುದ್ಧ ಹಿಂದಿ ಹೇರಿಕೆಯ ತಗಾದೆ ತೆಗೆದಿವೆ. ರಾಜ್‌ ಠಾಕ್ರೆಯ ಮಹಾರಾಷ್ಟ್ರ ನವನಿರ್ಮಾಣ ಸೇನೆ ಸಹ ವಿರೋಧಿಸಿದೆ.

ರಾಜ್ಯದ ಶಿಕ್ಷಣ ನೀತಿಯಡಿ ಹಿಂದಿ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸಿರುವ ಸರಕಾರದ ನಡೆ ಖಂಡಿಸಿರುವ ಉದ್ಧವ್‌ ಠಾಕ್ರೆ, ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆಗೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಮಹಾರಾಷ್ಟ್ರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯಡಿ 1 ರಿಂದ 5ನೇ ತರಗತಿ ಮಕ್ಕಳಿಗೆ ಮರಾಠಿ ಹಾಗೂ ಇಂಗ್ಲಿಷ್‌ ಜತೆಗೆ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ ಬೆನ್ನಿಗೆ ಉದ್ಧವ್‌ ಠಾಕ್ರೆ, ಸರಕಾರದ ನಡೆಯನ್ನು ವಿರೋಧಿಸಿದ್ದಾರೆ.

ನಮಗೆ ಹಿಂದಿ ಭಾಷೆಯ ಮೇಲೆ ಯಾವುದೇ ದ್ವೇಷವಿಲ್ಲ. ಆದರೆ, ಮಹಾರಾಷ್ಟ್ರದಲ್ಲಿಬಲವಂತವಾಗಿ ಹಿಂದಿಯನ್ನು ಏಕೆ ಹೇರಬೇಕು. ಮರಾಠಿಗರೇಕೆ ಹಿಂದಿ ಕಲಿಯ ಬೇಕು? ಪ್ರಾಥಮಿಕ ಹಾಗೂ ಮಾಧ್ಯಮಿಕ ಹಂತದ ಶಿಕ್ಷಣದಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಿರುವುದು ಏಕೆ? ಎಂದು

ನಾವೇಕೆ (ಮರಾಠಿಗರು) ಹಿಂದಿ ಕಲಿಯಬೇಕು. ಪ್ರಾಥಮಿಕ ಹಾಗೂ ಮಾಧ್ಯಮಿಕ ಹಂತದ ಶಿಕ್ಷಣದಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಿರುವುದು ಏಕೆ ರಾಜ್ಯದಲ್ಲಿನ ಫಡ್ನವಿಸ್‌ ನೇತೃತ್ವ ಸರಕಾರವನ್ನು ಪ್ರಶ್ನಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ