5:49 PM Thursday 16 - October 2025

ಶೌಚಾಲಯದ ಗೋಡೆ ತೆರವುಗೊಳಿಸುತ್ತಿದ್ದ ವೇಳೆ ಮೈಮೇಲೆ ಬಿದ್ದ ಗೋಡೆ: ಇಬ್ಬರು ಮಹಿಳೆಯರ ದಾರುಣ ಸಾವು

death
20/12/2021

ಸುಳ್ಯ: ಶೌಚಾಲಯದ ಹಳೆಯ ಗೋಡೆ ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಬಿದ್ದು ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದಲ್ಲಿ ನಡೆದಿದೆ.

60 ವರ್ಷ ವಯಸ್ಸಿನ ಬೀಪಾತುಮ್ಮ ಮತ್ತು 45 ವರ್ಷ ವಯಸ್ಸಿನ ನೆಬಿಸಾ ಮೃತಪಟ್ಟ ಮಹಿಳೆಯರು ಎಂದು ಗುರುತಿಸಲಾಗಿದೆ.  ಎಣ್ಮೂರು ಗ್ರಾಮದ ನರ್ಲಡ್ಕದ ನಿವಾಸಿ ಹರೀಶ್ ನಾಯ್ಕ್ ಎಂಬವರ ಹಳೆಯ ಮನೆಯ ಶೌಚಾಲಯದ ಗೋಡೆ ಕೆಡವುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಹಳೆಯ ಗೋಡೆಯನ್ನು ತೆರವುಗೊಳಿಸುತ್ತಿದ್ದ ವೇಳೆ ಗೋಡೆ ಈ ಇಬ್ಬರು ಮಹಿಳೆಯರ ಮೇಲೆ ಬಿದ್ದಿದ್ದು, ಗೋಡೆಯಡಿಯಲ್ಲಿ ಸಿಲುಕಿದ್ದ ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಎಸ್ ಐ ಆಂಜನೇಯ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಟ್ರಾವೆಲ್ ಹಿಸ್ಟರಿಯೇ ಇಲ್ಲದ ವಿದ್ಯಾರ್ಥಿನಿಗೆ ಒಮಿಕ್ರಾನ್: ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಒಮಿಕ್ರಾನ್ ಕೇಸ್ ಎಷ್ಟು?

ಪ್ರೇಮ ವೈಫಲ್ಯ: ಬೀದರ್ ಮೂಲದ ವಿದ್ಯಾರ್ಥಿನಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆ!

ಸಿಎಂ ಬೊಮ್ಮಾಯಿ ಕೇಂದ್ರ ಸಚಿವರಾಗುತ್ತಾರೆ: ಅಚ್ಚರಿಗೆ ಕಾರಣವಾದ ಮುರುಗೇಶ್ ನಿರಾಣಿ ಹೇಳಿಕೆ

ಭಾರತ 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್

ಮದುವೆ ವಿಚಾರಕ್ಕೆ ಗಲಾಟೆ: ತಂದೆಯಿಂದಲೇ ಪುತ್ರನ ಕೊಲೆ

ಇತ್ತೀಚಿನ ಸುದ್ದಿ

Exit mobile version