ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಜಿ.ಟಿ.ದೇವೇಗೌಡ ಶಂಕು ಸ್ಥಾಪನೆ
10/12/2020
ಚಾಮರಾಜನಗರ: ಶ್ರೀ ಭದ್ರಕಾಳಿ ಸಹಿತ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರ ಶಾಸಕರಾದ ಜಿ.ಟಿ.ದೇವೇಗೌಡರು ಶಂಕುಸ್ಥಾಪನೆ ನೆರವೇರಿಸಿದರು.
ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಸುತ್ತೂರು ಶ್ರೀ ಕ್ಷೇತ್ರದ ಶ್ರೀಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದೊಂದಿಗೆ ಇಂದು ಹಂಚ್ಯಾ ಗ್ರಾಮದಲ್ಲಿ ಶ್ರೀ ಭದ್ರಕಾಳಿ ಸಹಿತ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ಮಾಡಿ, ಪೂಜೆ ನೆರವೇರಿಸಿದರು.