ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ನಿಧನ

08/07/2024
ಕಲಬುರಗಿ: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ನಿಧನರಾಗಿದ್ದಾರೆ.
ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಸ್ವಾಮೀಜಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ–ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.
ಭಾನುವಾರವಷ್ಟೇ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ಶಾಸಕ ಬಿ.ಆರ್. ಪಾಟೀಲ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97